Advertisement
ಈ ಸಂಬಂಧ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಅನುಸಾರ ಪಾಲಿಕೆ ಶಾಲೆ ಪ್ರಾರಂಭಿಸಲಾಗುವುದು. ಎಲ್ಲಾ ಶಿಕ್ಷಕರು ಶಾಲೆ ಪ್ರಾರಂಭವಾಗುವ 72 (3 ದಿನ) ಗಂಟೆಗಳಿಂತ ಮೊದಲು ಕೋವಿಡ್ ಸೋಂಕು ಪರೀಕ್ಷೆಗೆ ಒಳಗಾಗಬೇಕು ಹಾಗೂ ನೆಗೆಟಿವ್ ವರದಿ ಇದ್ದರೆ ಮಾತ್ರ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
Related Articles
Advertisement
ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿ ಶಾಲೆ ಪ್ರಾರಂಭ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ, ಮಾರ್ಗಸೂಚಿಯಲ್ಲಿ ಎಲ್ಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು. ಮಕ್ಕಳಿಗೆ ಸ್ಯಾನಿಟೈಸರ್ ತರಲು ಸೂಚನೆ ನೀಡಬೇಕು ಎಂದು ಉಲ್ಲೇಖ ಮಾಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ದಿನಾಂಕ ಹಾಗೂ ಪಠ್ಯ ಕಡಿತದಬಗ್ಗೆ ಚರ್ಚೆ. ಅದೇ ರೀತಿ 1ರಿಂದ 5ನೇ ತರಗತಿ ಮಕ್ಕಳಿಗೆ ವಿದ್ಯಾಗಮದ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾಗಮ, ಎಸ್‌ಎಸ್‌ಎಲ್‌ಸಿ ಮಾರ್ಗಸೂಚಿಗಳು :
- ಪ್ರತಿ ಶಾಲೆಯಲ್ಲಿ ಸೋಂಕಿನ ಲಕ್ಷಣ ಇರುವ ಮಕ್ಕಳಿಗೆ ಪ್ರತ್ಯೇಕ ಐಸೋಲೇಷನ್ ಕೊಠಡಿ ಮೀಸಲಿಡ ಬೇಕು. ಮಕ್ಕಳಲ್ಲಿ ಸೋಂಕಿನ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಬಳಿಕ ಹತ್ತಿರ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಬೇಕು.
- ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ಮಾತ್ರ ತರಗತಿ.
- ಒಂದು ತಂಡದಲ್ಲಿ 15 ವಿದ್ಯಾರ್ಥಿಗಳು ಮಾತ್ರ ಇರಬೇಕು. 50 ವರ್ಷ ಮೇಲ್ಪಟ್ಟ ಶಿಕ್ಷಕರು ಮಾಸ್ಕ್, ಫೇಸ್ ಶೀಲ್ಡ್ ಧರಿಸುವುದು ಕಡ್ಡಾಯ.
- ಎಲ್ಲ ಶಾಲೆಗಳ ಆವರಣ, ಶೌಚಾಲಯ ಹಾಗೂ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಿಸಿ, ಸ್ವತ್ಛವಾಗಿಇರಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಶಿಕ್ಷಕರಿಗೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ.
- ದೈಹಿಕ ಶಿಕ್ಷಣ ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆಸಬಹುದು. ಗುಂಪಿನ ಆಟ ನಡೆಸುವಂತಿಲ್ಲ.
- ದಾಖಲಾತಿ ಕಡ್ಡಾಯವಾಗಿ ಇರಲಿದೆ. ಆದರೆ, ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಶಾಲೆಗಳು ಮುಂದುವರಿಯುತ್ತವೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗಂಟಲು ದ್ರವ ಮಾದರಿ ಸೋಂಕು ಪರೀಕ್ಷೆ ನಡೆಸಿ, ನೆಗೆಟಿವ್ ಇದ್ದರೆ ಮಾತ್ರ ದಾಖಲಾತಿಗೆ ಅವಕಾಶ ಕಲ್ಪಿಸುವುದು.
- ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರು ತರ ಬೇಕು. ಇಲ್ಲವಾದರೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು.
- ಕೈತೊಳೆಯುವ ಸೋಪ್ ಬಳಸುವ ಬಗ್ಗೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳಿಗೆ ಕೈತೊಳೆಯುವ ವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು.