Advertisement
ಪಶ್ಚಿಮ ಘಟ್ಟಗಳು ತುಂಗಾ, ಭದ್ರಾ,ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ,ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ.ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮ ಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿ ಗಳು ತುಂಬಿ ಹರಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಂಗಾರು ಮಳೆಯ ಮಾರುತ ಗಳನ್ನು ತಡೆದು ವ್ಯಾಪಕ ಮಳೆ ಆಗು ವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿ ನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ನಲ್ಲಿ ಕೆಲವೇ ಕೆಲವು ರೂಪಾಯಿ ಹಸುರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಿದರೆ ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿ, ವೃಕ್ಷ ಸಂವರ್ಧನೆ ಗಾಗಿ, ಅರಣ್ಯದಂಚಿನ ರೈತರು ಅರಣ್ಯ ಇಲಾಖೆಗೆ ಮಾರಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.