Advertisement

CET: 2ನೇ ಸುತ್ತಿನ ವೇಳಾಪಟ್ಟಿ ಪ್ರಕಟ

11:34 PM Sep 16, 2023 | Team Udayavani |

ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2023ರ 2ನೇ ಮುಂದುವರಿದ ಸುತ್ತಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಸೆ.22ರ ಬೆಳಗ್ಗೆ 10 ಗಂಟೆ ವರೆಗೂ ಸಲ್ಲಿಸಬಹುದು. ಮೊದಲ ಹಾಗೂ ಎರಡನೇ ಸುತ್ತಿನಲ್ಲಿ ಸೀಟು ದೊರೆತಿರುವ ಅಭ್ಯರ್ಥಿಗಳು ತಮ್ಮ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಸೆ.21ರ ಬೆಳಗ್ಗೆ 11 ಗಂಟೆಯವರೆಗೂ ಸಮಯವಿದೆ. ಅಂತಹ ಅಭ್ಯರ್ಥಿಗಳ 5 ಸಾವಿರ ರೂ. ಕಡಿತ ಮಾಡಿಕೊಂಡು ಉಳಿದ ಮೊತ್ತವನ್ನು ಹಿಂದಿರುಗಿಸಲಾಗುತ್ತದೆ.

Advertisement

ಸೆ.23ರ ರಾತ್ರಿ 8ಕ್ಕೆ ಎರಡನೇ ಮುಂದುವರಿದ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೆ.25ರಿಂದ 27ರ ವರೆಗೆ ಅವಕಾಶ ನೀಡಲಾಗಿದೆ. ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸೆ.29ರ ಸಂಜೆ 5.30 ಕೊನೆಯ ದಿನವಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next