Advertisement

ಬೆಂಗಳೂರು: ಸಿಇಟಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಮಾರ್ಚ್‌ 30ರ ಬೆಳಗ್ಗೆ 11ರಿಂದ ಎ.1ರ ಸಂಜೆ 4 ಗಂಟೆಯ ವರೆಗೆ ಮತ್ತೂಂದು ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೀಡಿದೆ.

Advertisement

ಅರ್ಜಿ ಸಲ್ಲಿಸುವವರು ಎ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.

ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. ಪರೀಕ್ಷೆ ಎ.18 ಮತ್ತು 19ರಂದು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next