ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11ರ ಬೆಳಗ್ಗೆ 8 ಗಂಟೆಯಿಂದ ಮೇ 13ರ ಬೆಳಗ್ಗೆ 11ರ ವರೆಗೆ ಮತ್ತು ಶುಲ್ಕ ಪಾವತಿಸಲು ಅಂದು ಸಂಜೆ 6 ಗಂಟೆಯ ತನಕ ಕೊನೆಯ ಅವಕಾಶ ನೀಡಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
Advertisement
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟ ರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸು ಗಳಿಗೆ 2023ರಲ್ಲಿ ಪ್ರವೇಶಾವಕಾಶ ಬಯಸುವ ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿ ಕೊಳ್ಳಬಹುದು ಎಂದು ಪ್ರಾಧಿಕಾರ ತಿಳಿಸಿದೆ.