Advertisement
ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು, ಕೋವಿಡನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
Related Articles
Advertisement
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಇದೇ 30ರಂದು 6 ಸ್ಥಳಗಳಲ್ಲಿ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ :ಗಂಡು ಮಗುವಿಗೆ ಜನ್ಮ ನೀಡಿದ ಟಿಎಂಸಿ ಸಂಸದೆ, ನಟಿ ನುಸ್ರತ್ ಜಹಾನ್
ಪರೀಕ್ಷೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು:
– ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು.
– ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು. ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಬೇಕು.
– ಒಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
– ಉತ್ತರಗಳನ್ನು OMR ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕಾಗಿರುವುದರಿಂದ, ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ನೀಲಿ (Blue) ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ (Black Ink Ball Point) ಪೆನ್ನನ್ನು ತೆಗೆದುಕೊಂಡು ಹೋಗಬೇಕು.
– ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ. ಹಾಗೆಯೇ ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು (ಕೆಇಎ ವೆಬ್‌ಸೈಟ್ //kea.kar.nic.in ಗೆ ಭೇಟಿ ನೀಡಿ)
– ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ, 2ನೇ ಪಿಯುಸಿ / 12ನೇ ತರಗತಿಯ ಪ್ರವೇಶಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು.
– ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್ / ಮೊಬೈಲ್ / ಕ್ಯಾಲುಕುಲೇಟರ್‌ಗಳನ್ನು ತರುವಂತಿಲ್ಲ.
– ಅಭ್ಯರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ.