Advertisement
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು. 30ರಂದು ಹೊರ ಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್ ರದ್ದು ಮಾಡಿದೆ. ಇದರಿಂದ ಕೋವಿಡ್-19 ಕಾರಣದಿಂದ ಪರೀಕ್ಷೆ ಬರೆಯದೆ “ಆಂತರಿಕ ಮೌಲ್ಯಮಾಪನದ’ ಆಧಾರದಲ್ಲಿ 2021ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯು ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಅನುಕೂಲವಾದಂತಾಗಿದೆ.
Related Articles
2020-21ನೇ ಸಾಲಿನ ಪಿಯು ಪರೀಕ್ಷೆಯ ಶೇ.50 ಅಂಕಗಳನ್ನು ಪರಿಗಣಿಸಲು ಸರಕಾರಕ್ಕೆ ನಿರ್ದೇ ಶಿಸುವಂತೆ ಅರ್ಜಿದಾರರು ಕೋರಿ ದ್ದಾರೆ. ಮತ್ತೂಂದೆಡೆ ಕೋವಿಡ್ ಹಿನ್ನೆಲೆ ಯಲ್ಲಿ 2021ನೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣ ಆಗಿರುವುದರಿಂದ ಅವರ ಮನವಿ ಪರಿಗಣಿಸುವುದಿಲ್ಲ ಎಂಬು ದಾಗಿ ಸರಕಾರ ಹೇಳುತ್ತಿದೆ. ಹಾಗಾಗಿ, ಸಿಇಟಿಯ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯ ಶೇ.25ರಷ್ಟು ಅಂಕ ಪರಿಗಣಿಸಿ ರ್‍ಯಾಂಕ್ ಲಿಸ್ಟ್ ಪ್ರಕಟಿಸಲು ಸಾಧ್ಯವೇ ಎಂದು ಹೈಕೋರ್ಟ್ ಸರಕಾರವನ್ನು ಕೇಳಿತ್ತು. ಇದಕ್ಕೆ ಸರಕಾರ ಒಪ್ಪಿರಲಿಲ್ಲ.
Advertisement
ಹೈಕೋರ್ಟ್ ಹೇಳಿದ್ದು01.ಕಳೆದ ಸಾಲಿನ ಪಿಯು ಅಂಕಗಳನ್ನು ಬೇರೆ ಪದವಿ ಕೋರ್ಸ್‌ಗಳಿಗೆ ಪರಿಗಣಿಸಿ, ಕೇವಲ ತಾಂತ್ರಿಕ ಕೋರ್ಸ್‌ಗಳಿಗೆ ಪರಿಗಣಿಸದೇ ಇರುವುದು ತಾರತಮ್ಯ.
02.ಸಿಇಟಿ ರ್‍ಯಾಂಕಿಂಗ್ ಪ್ರಕಟವಾದ ದಿನವೇ 2021ನೇ ಸಾಲಿನ ಪಿಯು ಅಂಕಗಳನ್ನು ಪರಿಗಣಿಸದಿರುವ ಬಗ್ಗೆ ಕೆಇಎ ಟಿಪ್ಪಣಿ ಹೊರಡಿಸಿದೆ. ಆಯ್ಕೆ ಪ್ರಕ್ರಿಯೆ ಆರಂಭಗೊಂಡು ಅದು ಮುಗಿಯುವ ಹಂತದಲ್ಲಿರುವಾಗ ಈ ರೀತಿ ಅರ್ಹತ ಮಾನದಂಡಗಳನ್ನು ಬದಲಿಸಲು ಸಾಧ್ಯವಿಲ್ಲ. 2022ರ ಎ. 18ರಿಂದ ಸಿಇಟಿ ಪ್ರಕ್ರಿಯೆ ಆರಂಭಗೊಂಡಿದ್ದು, ಜು. 30ರಂದು ಮುಕ್ತಾಯ ಹಂತದಲ್ಲಿರುವಾಗ ಕೆಇಎ ಆದೇಶ ಹೊರಡಿಸಿದೆ. ಇದು ಕಾನೂನುಬಾಹಿರ ಕ್ರಮ.
03.2022ನೇ ಸಾಲಿನ ಸಿಇಟಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಹಾಗೂ ಕೆಇಎ ಹೊರಡಿಸಿರುವ ಬುಲೆಟಿನ್‌ನಲ್ಲಿ ಅರ್ಹತೆ, ವಿದ್ಯಾರ್ಹತೆ, ಮೆರಿಟ್ ಮತ್ತಿತರ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ದ್ವಿತೀಯ ಪಿಯುಸಿ ಹಾಗೂ ಸಿಇಟಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಸಮಾನ ಪ್ರಮಾಣದಲ್ಲಿ ಪರಿಗಣಿಸುವ ಬಗ್ಗೆ ಹೇಳಲಾಗಿದೆಯೇ ಹೊರತು, 2021ನೇ ಸಾಲಿನ ಅಂಕಗಳನ್ನು ಪರಿಗಣಿಸದಿರುವ ಬಗ್ಗೆ ಎಲ್ಲಿಯೂ ಸ್ಪಷ್ಟವಾಗಿ ಹಾಗೂ ಸೂಚ್ಯವಾಗಿ ತಿಳಿಸಿಲ್ಲ. 042021ರಲ್ಲಿ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿ ಗಳಿಗೆ ಅವರ ಪಿಯು ಅಂಕಗಳನ್ನು 2022ನೇ ಸಾಲಿನ ಸಿಇಟಿ ರ್‍ಯಾಂಕ್‌ಗೆ ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಮೊದಲೇ ಮಾಹಿತಿ ನೀಡಿಲ್ಲ. 2022ರ ಜು.30ರಂದು ಟಿಪ್ಪಣಿ ಹೊರಡಿಸುವವರೆಗೂ ವಿದ್ಯಾರ್ಥಿಗಳಿಗೆ ಆ ಬಗ್ಗೆ ಯಾವುದೇ ಮಾಹಿತಿಯೇ ಇರಲಿಲ್ಲ. ಪರೀûಾ ಪ್ರಾಧಿಕಾರದ ಈ ಕ್ರಮ ಅರ್ಜಿದಾರರು ಹಾಗೂ ಇತರ ಪುನರಾವರ್ತಿತ ವಿದ್ಯಾರ್ಥಿಗಳನ್ನು ಅವಕಾಶವಂಚಿತರನ್ನಾಗಿಸುತ್ತದೆ. ಲಾಭವೇನು?
-ಪುನರಾವರ್ತಿತ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಶೇ.50ರಷ್ಟು ಅಂಕ ಗಳನ್ನು ಪರಿಗಣಿಸುವಂತೆ ತೀರ್ಪು ನೀಡಿ ರುವುದರಿಂದ ರ್‍ಯಾಂಕ್ ಪಟ್ಟಿಯಲ್ಲಿ ಹಿಂದಿದ್ದ ವಿದ್ಯಾರ್ಥಿಗಳಿಗೆ ಅನುಕೂಲ
– ಪುನರಾವರ್ತಿತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ
– ಸರಕಾರದ ಎಡವಟ್ಟಿನಿಂದ ನೊಂದಿದ್ದ ವಿದ್ಯಾರ್ಥಿಗಳನ್ನು ನ್ಯಾಯಾಲಯದ ತೀರ್ಪು ಅತಂತ್ರ ಪರಿಸ್ಥಿತಿಯಿಂದ ಪಾರು ಮಾಡಿದೆ ನಷ್ಟವೇನು?
– ಈ ವರ್ಷ ಸಿಇಟಿ ಬರೆದಿರುವ ವಿದ್ಯಾರ್ಥಿಗಳು ರ್‍ಯಾಂಕ್ ಪಟ್ಟಿಯಲ್ಲಿ ಹಿಂದುಳಿಯಬಹುದು
– ಮೊದಲ ಸುತ್ತಿನಲ್ಲಿಯೇ ಸೀಟು ಸಿಗಲಿದೆ ಎಂದು ಖುಷಿಯಲ್ಲಿದ್ದವರು 2ನೇ ಸುತ್ತಿನಲ್ಲಿ ಅಥವಾ 3ನೇ ಸುತ್ತಿನವರೆಗೂ ಸೀಟಿಗಾಗಿ ಕಾಯಬೇಕಾಗಬಹುದು ಅಥವಾ ಸೀಟು ಸಿಗದಿರಬಹುದು
-ರ್‍ಯಾಂಕ್ ಪಟ್ಟಿ ಪ್ರಕಟಿಸುವುದುಸೇರಿದಂತೆ ಪ್ರಕ್ರಿಯೆಯನ್ನು ಕೆಇಎ ಮತ್ತೆ ಹೊಸದಾಗಿ ನಡೆಸಬೇಕಾಗುತ್ತದೆ. ಇದು ಕೆಇಎ ದೊಡ್ಡ ಹೊಡೆತ
-ಪ್ರಕ್ರಿಯೆ ನಡೆಸಲು ಸಾಕಷ್ಟುಸಮಯದ ಆವಶ್ಯಕತೆ ಇರುವುದರಿಂದ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಬೋಧನ ತರಗತಿಗಳು ತಪ್ಪಲಿವೆ. ಸರಕಾರದ ಎಡವ ಟ್ಟನ್ನು ಪ್ರಶ್ನಿಸುವ ಜತೆಗೆ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿರುವುದರಿಂದ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಿದೆ. ಸಾವಿರಾರು ವಿದ್ಯಾರ್ಥಿಗಳಲ್ಲಿ ಆಶಾಭಾವನೆ ಮೂಡಿಸಿದೆ.
-ಅರವಿಂದ, ಪುನರಾವರ್ತಿತ ಅಭ್ಯರ್ಥಿ ನ್ಯಾಯಾಲಯದ ತೀರ್ಪಿನಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ತಬ್ಬಿಬ್ಟಾಗಿದ್ದಾರೆ. ರ್‍ಯಾಂಕ್ ಪಟ್ಟಿಯಲ್ಲಿ ಹಿಂದುಳಿಯುವ ಜತೆಗೆ ಇಚ್ಛಿ ಸುವ ಕಾಲೇಜಿನಲ್ಲಿ ಸೀಟು ಕೈ ತಪ್ಪುವ ಆತಂಕ ಮೂಡಿದೆ.
– ಮನೋಜ್,
ಸಿಇಟಿ ರ್‍ಯಾಂಕ್ ಅಭ್ಯರ್ಥಿ ನ್ಯಾಯಾಲಯದ ಏನೆಂದು ತೀರ್ಪು ನೀಡಿದೆ ಎಂದು ಸಂಪೂರ್ಣವಾಗಿ ತಿಳಿದುಬಂದಿಲ್ಲ. ಸವಿವರ
ವಾಗಿ ತಿಳಿದ ಅನಂತರಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
– ಡಾ| ಸಿ.ಎನ್.ಅಶ್ವತ್ಥ ನಾರಾಯಣ,ಉನ್ನತ ಶಿಕ್ಷಣ ಸಚಿವ