Advertisement

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

11:28 PM Oct 23, 2024 | Team Udayavani |

ಬೆಂಗಳೂರು: ಯುಜಿಸಿಇಟಿ-2024ರ 2ನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಯಾದರೂ ಶುಲ್ಕ ಪಾವತಿಸಿ, ಸಂಬಂಧಪಟ್ಟ ಎಂಜಿನಿಯರಿಂಗ್‌ ಕಾಲೇಜುಗಳಿಗೆ ವರದಿ ಮಾಡಿಕೊಳ್ಳದ ಒಟ್ಟು 2,348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರಣ ಕೇಳಿ ಬುಧವಾರ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

Advertisement

ಪ್ರತಿಷ್ಠಿತ ಕಾಲೇಜುಗಳು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಈ ಅಭ್ಯರ್ಥಿಗಳು ವರದಿ ಮಾಡಿಕೊಳ್ಳದ ಕಾರಣ ಅವರ ಅನಂತರದ ಮೆರಿಟ್‌ ವಿದ್ಯಾರ್ಥಿಗಳಿಗೆ ಈ ಸೀಟುಗಳು ಸಿಗದೆ ಅನ್ಯಾಯ ಮಾಡಿದಂತಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಅಭ್ಯರ್ಥಿಗಳ ನೋಂದಾಯಿತ ಇ-ಮೇಲ್‌ಗೆ ನೋಟಿಸ್‌ ಕಳುಹಿಸಲಾಗಿದೆ. 3 ದಿನಗಳಲ್ಲಿ ಅವರು ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ. ಸೀಟು ಹಂಚಿಕೆ ಅನಂತರ ಶುಲ್ಕ ಕಟ್ಟದವರು, ಶುಲ್ಕ ಕಟ್ಟಿಯೂ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳದವರು ಹಾಗೂ ಅಪೂರ್ಣ ಶುಲ್ಕ ಕಟ್ಟಿದವರು-ಹೀಗೆ ಒಟ್ಟು 3 ವಿಭಾಗಗಳನ್ನು ಮಾಡಿಕೊಂಡು ನೋಟಿಸ್‌ ನೀಡಲಾಗಿದೆ. ಅಭ್ಯರ್ಥಿಗಳು ನೀಡುವ ಉತ್ತರ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾಗಿದ್ದರೂ ಒಟ್ಟು 2,208 ಮಂದಿ ಶುಲ್ಕ ಪಾವತಿಸಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ, ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡು ಕಾಲೇಜುಗಳಿಗೆ ಹೋಗಿಲ್ಲ. 45 ಮಂದಿ ಅಲ್ಪಸ್ವಲ್ಪ ಶುಲ್ಕ ಪಾವತಿಸಿದ್ದಾರೆ. ಇಷ್ಟೂ ಮಂದಿಗೆ ನೋಟಿಸ್‌ ನೀಡಲಾಗಿದೆ ಎಂದು ಪ್ರಸನ್ನ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next