Advertisement
ಎಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್ ಗಳ ಸರ್ಕಾರಿ ಕೋಟದ ಸೀಟುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ನಡೆಯಲಿದೆ.
Related Articles
Advertisement
ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜು.14 ರಿಂದ 20ರ ವರೆಗೆ ಅವಕಾಶ ಇರಲಿದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು (ಶುಲ್ಕ ಪಾವತಿಸಿದವರಿಗೆ ) ಜು.19ರಿಂದ 22ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 13ರಂದು ಪ್ರವೇಶ ಪತ್ರ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮಾಹಿತಿಗೆ ಪ್ರಾಧಿಕಾರದ ವೆಬ್ ಸೈಟ್ //kea.kar.nic.in/ ನೋಡಬಹುದಾಗಿದೆ.