Advertisement

ಸಿಇಟಿ ರ‍್ಯಾಂಕಿಂಗ್‌ ಗೊಂದಲ: ಮತ್ತೆ ಕೋರ್ಟ್ ಮೊರೆ ಹೋಗಲು ಸರ್ಕಾರದ ನಿರ್ಧಾರ

11:57 AM Sep 05, 2022 | Team Udayavani |

ಬೆಂಗಳೂರು: ಸಿಇಟಿ ರ‍್ಯಾಂಕಿಂಗ್‌ ಗೊಂದಲ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧವಾಗಿ ಮತ್ತೆ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ಸಭೆ ನಡೆಸಿರುವ ಉನ್ನತ ಶಿಕ್ಷಣ ಸಚಿವ ಡಾ|ಸಿ.ಎನ್ ಅಶ್ವಥ ನಾರಾಯಣ ಸರ್ಕಾರದ ಅಭಿಪ್ರಾಯ ಪ್ರಕಟಿಸಿದ್ದಾರೆ.

Advertisement

ಟ್ವೀಟ್ ಮಾಡಿರುವ ಅವರು, ಪ್ರಸಕ್ತ ವರ್ಷದ ಸಿಇಟಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂಕ ಪರಿಗಣಿಸುವಂತೆ ಉಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದ ಪ್ರಸಕ್ತ ಸಾಲಿನ 1.5ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ದಾಖಲೆಗಳ ಸಮೇತ ಪುನಃ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಸ್ಥಾನ ಸಿಗಲಿದೆ? ನಿತೀಶ್ ಯೂ ಟರ್ನ್

ತಾಂತ್ರಿಕ ಅನಾನುಕೂಲತೆಯ ಸಮಸ್ಯೆಯನ್ನು ನಿವಾರಿಸುವ ಜತೆ ತ್ವರಿತವಾಗಿ ಕೌನ್ಸಿಲಿಂಗ್‌ ಆರಂಭಿಸುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲಿ ಕ್ರಮವಹಿಸಲಾಗುವುದು. ವಿದ್ಯಾರ್ಥಿಗಳ ಹಿತರಕ್ಷಣೆ ಕಾಪಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದ್ದಾರೆ.

Advertisement

ಕೆಇಎ ಕ್ರಮ ಪ್ರಶ್ನಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳ ಸಂಬಂಧ ಶನಿವಾರ ನ್ಯಾ.ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿದೆ. ಜತೆಗೆ 2020-21ನೇ ಸಾಲಿನಲ್ಲಿ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ.50 ಅಂಕಗಳು ಮತ್ತು ಸಿಇಟಿಯಲ್ಲಿ ಪಡೆದ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್‍ಯಾಂಕ್‌ ಪಟ್ಟಿ ಪ್ರಕಟಿಸಬೇಕು ಎಂದು ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತ್ತು.

2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು.30ರಂದು ಹೊರಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್‌ ರದ್ದು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next