ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಜೂನ್ 12ರಿಂದ ನಡೆಯಲಿದೆ.
ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟು ಪಡೆಯಲಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಜೂ.7ರಿಂದ ಆರಂಭವಾಗಬೇಕಿತ್ತು. ಆದರೆ, ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿತ್ತು. ಇದೀಗ ದಾಖಲಾತಿ ಪರಿಶೀಲನೆ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದ್ದು,
ಜೂನ್ 12ರಿಂದ ಆರಂಭವಾಗಿ, ಅಂತಿಮ ರ್‍ಯಾಂಕ್ ಮುಗಿಯುವವರೆಗೂ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ದಾಖಲೆ ಪರಿಶೀಲನೆಗೆ ಹಾಜರಾಗಬೇಕು. ವಿದ್ಯಾರ್ಥಿಗಳು ಪಡೆದಿರುವ ರ್‍ಯಾಂಕ್ ಆಧಾರದಲ್ಲಿ ಪರಿಶೀಲನೆ ನಡೆಯಲಿದೆ.
ಬೆಂಗಳೂರು ಕೇಂದ್ರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ 15 ಸಹಾಯಕ ಕೇಂದ್ರದಲ್ಲೂ ದಾಖಲೆ ಪರಿಶೀಲನೆ ನಡೆಯಲಿದೆ ಎಂದು ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.
ಸಹಾಯಕ ಕೇಂದ್ರ: ಬಾಪೂಜಿ ತಾಂತ್ರಿಕ ಶಿಕ್ಷಣ ಸಂಸ್ಥೆ ದಾವಣಗೆರೆ, ಸರ್ಕಾರಿ ಪಾಲಿಟೆಕ್ನಿಕ್ ಬಳ್ಳಾರಿ, ಯುನಿವರ್ಸಿಟಿ ಕೃಷಿ ಕಾಲೇಜು ರಾಯಚೂರು, ಪಿಡಿಎ ಎಂಜಿನಿಯರಿಂಗ್ ಕಾಲೇಜು ಕಲಬುರಗಿ, ಡಾ.ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು ವಿಜಯಪುರ, ಜೈನ್ ಎಂಜಿನಿಯರಿಂಗ್ ಕಾಲೇಜು ಮತ್ತು ಅಂಗಡಿ ತಾಂತ್ರಿಕ ಹಾಗೂ ಮ್ಯಾನೇಜಮೆಂಟ್ ಸಂಸ್ಥೆ ಬೆಳಗಾವಿ, ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಧಾರವಾಡ, ಗಿರಿಜ ಬಾಯಿ ಸೈಲ್ ತಾಂತ್ರಿಕ ಶಿಕ್ಷಣ ಸಂಸ್ಥೆ ಕಾರವಾರ, ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮಂಗಳೂರು,ಜವಾಹರ್‌ಲಾಲ್ ನೆಹರು ನ್ಯಾಷನಲ್ ಎಂಜಿನಿಯರಿಂಗ್ ಕಾಲೇಜು ಶಿವಮೊಗ್ಗ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಸನ, ವಿದ್ಯಾವರ್ಧಕ
ಎಂಜಿನಿಯರಿಂಗ್ ಕಾಲೇಜು ಮೈಸೂರು, ಸಿದ್ಧಗಂಗಾ ತಾಂತ್ರಿಕ ಶಿಕ್ಷಣ ಸಂಸ್ಥೆ ತುಮಕೂರು, ಗುರುನಾನಕ್
ದೇವ್ ಎಂಜಿನಿಯರಿಂಗ್ ಕಾಲೇಜು ಬೀದರ್, ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆ ಕೊಪ್ಪಳ ಹೀಗೆ 15 ಸಹಾಯಕ
ಕೇಂದ್ರದಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ.
ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ // kea.kar.nic.in ಸಂಪರ್ಕಿಸಬಹುದು.