Advertisement

ಆ.20ರ ಒಳಗೆ ಸಿಇಟಿ ಫಲಿತಾಂಶ ಪ್ರಕಟ : ಡಿಸಿಎಂ ಅಶ್ವತ್ಥನಾರಾಯಣ

07:37 PM Aug 06, 2020 | sudhir |

ಬೆಂಗಳೂರು: ರಾಜ್ಯದಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ 20ರ ಒಳಗೆ ಬಿಡುಗಡೆ ಮಾಡಲಾಗುವುದು ಹಾಗೂ ಆನ್‍ಲೈನ್ ಮೂಲಕ ಈ ಬಾರಿ ಕೌನ್ಸಿಲಿಂಗ್ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Advertisement

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೃತ್ತಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿರುವ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 20ರ ಒಳಗೆ ಪ್ರಕಟಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫಲಿತಾಂಶ ಪ್ರಕಟವಾದ ಮೇಲೆ ಆನ್‍ಲೈನ್ ಮೂಲಕ ಕೌನ್ಸಿಲಿಂಗ್, ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ಇನ್ನು ನೀಟ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ನಿರ್ದೇಶನ ಬರಬೇಕಾಗಿದ್ದು, ಇಲ್ಲಿಯವರೆಗೆ ಯಾವುದೇ ಸೂಚನೆ ಬಂದಿಲ್ಲ ಎಂದರು.

ಕೋವಿಡ್ ಸೋಂಕಿನ ಸವಾಲಿನ ಮಧ್ಯೆಯೇ ಎಲ್ಲ ಕೆಲಸಗಳು ನಡೆಯುತ್ತಿವೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ನೀಟ್ ಪರೀಕ್ಷೆ ಸಹ ನಡೆಸಲಾಗುವುದು. ಇದಕ್ಕೆ ಯಾವುದೇ ಸಮಸ್ಯೆ ಇಲ್ಲ. ವೈದ್ಯಕೀಯ ಸೀಟ್ ಹಂಚಿಕೆ ವಿಚಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಕ್ರಮ ತೆಗೆದುಕೊಳ್ಳಲಿದ್ದಾರೆ. ವಾರದಲ್ಲಿ ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಚರ್ಚೆ ಮಾಡಿ ಸೀಟ್ ಹಂಚಿಕೆ ವಿಚಾರ ಅಂತಿಮ ಮಾಡಲಾಗುವುದು. ಕೋವಿಡ್ ತುರ್ತು ಪರಿಸ್ಥಿತಿ ಇರುವುದರಿಂದ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು ಮಾನವೀಯತೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next