ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ.
ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯದೇ ಇರುವುದರಿಂದ ಈ ಬದಲಾವಣೆ ಮಾಡಿಕೊಳ್ಳಲಾಗಿದೆ. ಸಿಇಟಿ ಫಲಿತಾಂಶದ ನಂತರ ದಾಖಲಾತಿ ಪರಿಶೀಲನೆ ಹಾಗೂ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.
ಇದನ್ನೂ ಓದಿ:ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪತ್ನಿ ನಿಧನ
ಬಹುಆಯ್ಕೆ ಪ್ರಶ್ನೆಗಳ ಮೂಲಕ ಪರೀಕ್ಷೆ ನಡೆದಿರುವುದರಿಂದ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದಿಲ್ಲ. ಹೀಗಾಗಿ ಸೆ.15ರೊಳಗೆ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣವಾಗಲಿದೆ. ನಂತರ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರು ಪ್ರಕಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.