Advertisement

ಎರಡನೇ ದಿನವೂ CET ಸುಸೂತ್ರ

10:03 PM May 21, 2023 | Team Udayavani |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ರವಿವಾರ ನಡೆದ ಸಿಇಟಿ-2023 ಸೂಸೂತ್ರವಾಗಿ ನಡೆದಿದೆ.

Advertisement

ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,61,610 ಅಭ್ಯರ್ಥಿಗಳಲ್ಲಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಎರಡೂ ವಿಷಯಗಳಿಗೆ 2,43,728 (ಶೇ.93.16) ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

ಪರೀಕ್ಷೆಗೆ ಹೆಚ್ಚುವರಿ ಸಮಯ
ಬೆಂಗಳೂರು ನಗರದಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದ್ದು, ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆಯೂ ಪರಿಣಾಮ ಬೀರಿತು. ದಟ್ಟ ಮೋಡ, ಬಿರುಗಾಳಿ- ಮಳೆಯಿಂದ ಕತ್ತಲೆ ಆದಂತೆ ಆಗಿತ್ತು. ಮಳೆಗೆ ಮರ ಬಿದ್ದು ಮಲ್ಲೇಶ್ವರದ 13 ಮತ್ತು 18ನೇ ಅಡ್ಡರಸ್ತೆಯಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು ಸಮಯ ಅಭಾವದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ವಿದ್ಯುತ್‌ ವ್ಯತ್ಯಯದ ಬಗ್ಗೆ ಬೆಸ್ಕಾಂನಿಂದ ಮಾಹಿತಿ ಪಡೆದ ಕೆಇಎ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ 15 ನಿಮಿಷ ಅವಧಿಯನ್ನು ಪರೀಕ್ಷೆ ಬರೆಯಲು ನೀಡಲಾಗಿತ್ತು ಎಂದು ಎಸ್‌. ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಇಂದಿನ ಪರೀಕ್ಷೆ
ಸೋಮವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಮಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ ಮತ್ತು ವಿಜಯಪುರ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ವರಗೆ ಒಂದು ಗಂಟೆ ಕಾಲ ಐವತ್ತು ಅಂಕಗಳಿಗೆ ನಡೆಯಲಿದೆ. 2,084 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next