Advertisement

ಸಿಇಟಿ: ಹೈಕೋರ್ಟ್‌ ಸೂತ್ರ ನಿರಾಕರಿಸಿದ ಸರ್ಕಾರ

10:45 PM Aug 22, 2022 | Team Udayavani |

ಬೆಂಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಿಇಟಿ ಅಂಕಗಳಿಗೆ ಸಂಬಂಧಿಸಿ ಉಂಟಾಗಿರುವ ಗೊಂದಲ ನಿವಾರಣೆಗೆ ಹೈಕೋರ್ಟ್‌ ಸೂಚಿಸಿದ್ದ 75:25 ಅನುಪಾತದ ಸೂತ್ರವನ್ನು ಪರಿಗಣಿಸಲು ಸರ್ಕಾರ ನಿರಾಕರಿಸಿದೆ.

Advertisement

2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀûಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಆ.18ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿಗಳ ಸಿಇಟಿಯ ಶೇ.75 ಹಾಗೂ ದ್ವಿತೀಯ ಪಿಯುಸಿಯ ಶೇ.25 ಅಂಕಗಳನ್ನು ಪರಿಗಣಿಸಿ 75:25ರ ಅನುಪಾತದ ಸೂತ್ರ ಅಳವಡಿಸಿಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೇಳಿತ್ತು.

ಆದರೆ, ಸೋಮವಾರದ ವಿಚಾರಣೆ ವೇಳೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರ ವಕೀಲರು ಹಾಜರಾಗಿ, 75:25 ಅನುಪಾತದ ಸೂತ್ರ ಪರಿಗಣಿಸಿ ರ್‍ಯಾಂಕ್‌ ಲಿಸ್ಟ್‌ ಪ್ರಕಟಿಸಲು ಸಾಧ್ಯವಿಲ್ಲ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next