Advertisement

ನ್ಯಾ.ಮಲ್ಲಿಕಾರ್ಜುನ ಗೌಡ ವಜಾಕ್ಕೆ ಆಗ್ರಹಿಸಿ ಚಾ.ನಗರ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ

04:42 PM Feb 28, 2022 | Team Udayavani |

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡಸಲಾಯಿತು.

Advertisement

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ  ಪ್ರತಿಭಟನಾನಿರತರು ಸಹಸ್ರಾರು ಸಂಖ್ಯೆಯಲ್ಲಿ ಅಲ್ಲಿಂದ ಮೆರವಣಿಗೆ ಹೊರಟು ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಖಿ ವೃತ್ತ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನ ಮುಂಭಾಗ ಸಮಾವೇಶಗೊಂಡರು. ಬಿಜೆಪಿ ಸರ್ಕಾರದ ವಿರುದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ನಿರತರನ್ನುದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ಆರ್. ಧ್ರುವನಾರಾಯಣ ಮಾತನಾಡಿ, ಜನವರಿ 26 ಸಂವಿಧಾನ ಜಾರಿಯಾದ ದಿನ. ಅಂದು ಎಲ್ಲಕಡೆ ಅಂಬೇಡ್ಕರ್, ಗಾಂಧೀಜಿಯರಿಗೆ ಗೌರವ ಸಲ್ಲಿಸುವ ಸುದಿನ ಅಂತಹ ದಿನದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು ಕಾರ್ಯಕ್ರಮದಲ್ಲಿಟ್ಟಿರುವ ಅಂಬೇಡ್ಕರ್ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ನೆರವೇರಿಸಲು ಬರುವುದಾಗಿ ತಿಳಿಸಿ ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆ ಇವರ ವಿರುದ್ಧ ಸರ್ಕಾರ, ಹೈಕೋರ್ಟ್ ಯಾವುದೇ ಕ್ರಮಕೈಗೊಂಡಿಲ್ಲ. ಈ ಕಾರಣದಿಂದ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 388 ಅಂಕ ಏರಿಕೆಯೊಂದಿಗೆ ವಹಿವಾಟು ಅಂತ್ಯ

ಇಡೀ ವಿಶ್ವವೇ ಅಂಬೇಡ್ಕರ್ ಅವರನ್ನು ಪೂಜ್ಯನಿಯ ಭಾವನೆಯಿಂದ ಕಾಣುತ್ತದೆ. ಅವರು ವಿಶ್ವಜ್ಞಾನಿ, ದೇಶದ ಅಭಿವೃದ್ದಿಗೆ ಪೂರಕವಾದ ಸಂವಿಧಾನ ಕೊಟ್ಟಂತಹ ಮೇಧಾವಿಯಾಗಿದ್ದಾರೆ. ಇಡೀ ಜಗತ್ತು ಅವರನ್ನು ಗೌರವಿಸುತ್ತದೆ. ಆದರೆ ಕರ್ನಾಟಕದಲ್ಲಿ ಅವರಿಗೆ ನ್ಯಾಯಾಧೀಶರಿಂದ ಅಪಮಾನ ಮಾಡಲಾಗಿದೆ. ಇದು ಮನುವಾದಿ ನ್ಯಾಯಾಧೀಶರೊಬ್ಬರು ಮಾಡಿರುವ ರಾಷ್ಟ್ರದ್ರೋಹದ ಕೆಲಸ. ಈ ಕೂಡಲೇ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ದ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

Advertisement

ಪ್ರತಿಭಟನೆಯಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಡಾ.ತಿಮ್ಮಯ್ಯ, ಮಾಜಿ ಸಂಸದರಾದ ಎಂ.ಶಿವಣ್ಣ, ಸಿದ್ದರಾಜು, ಮಾಜಿ ಶಾಸಕರಾದ ಎ.ಆರ್ ಕೃಷ್ಣಮೂರ್ತಿ, ಎಸ್.ಜಯಣ್ಣ, ಮುಖಂಡ ಗಣೇಶ್ ಪ್ರಸಾದ್ ಮಾತನಾಡಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿ.ಪಂ. ಮಾಜಿ ಸದಸ್ಯ ಕೊಪ್ಪಾಳಿಮಹದೇವನಾಯಕ, ಕೆ.ಪಿ.ಸದಾಶಿವಮೂರ್ತಿ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ವಕ್ತಾರ ಕೆರೆಹಳ್ಳಿನವೀನ್,  ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಗುರುಸ್ವಾಮಿ ಎಚ್.ವಿ.ಚಂದ್ರು,  ತೋಟೇಶ್, ರಾಜಶೇಖರ್,  ಮುನಿರಾಜು, ಸಿದ್ದರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾಜತ್ತಿ, ಜಿಲ್ಲಾ ಮಾಧ್ಯಮ ವಕ್ತಾರ  ಅರುಣ್ ಕುಮಾರ್, ಎಪಿಎಂಸಿ ಅಧ್ಯಕ್ಷ ನಾಗೇಂದ್ರ ಕಾಗಲವಾಡಿಚಂದ್ರು ಪು. ಶ್ರೀನಿವಾಸನಾಯಕ, ಮಹೇಶ್ ಕುದರ್, ಡಿ ಎನ್ ನಟರಾಜು, ಆಲೂರು ಪ್ರದೀಪ್, ಅಣಗಳ್ಳಿ ಬಸವರಾಜು,ರಾಮಸಮುದ್ರ ನಾಗರಾಜು, ಕೆ ಎಂ ನಾಗರಾಜು,ಮಹೇಶ್ ಕುದರ್, ಶಿವಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next