ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಧ್ಯೆ ಈಗ “ಚಡ್ಡಿ” ಕಲಹ ಆರಂಭವಾಗಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಎದುರು ಎನ್ ಎಸ್ ಯುಐ ಕಾರ್ಯಕರ್ತರು ಚಡ್ಡಿ ಸುಟ್ಟು ಪ್ರತಿಭಟನೆ ನಡೆಸಿದ್ದನ್ನು ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯ ” ಚಡ್ಡಿ ಸುಟ್ಟಿದ್ದು ಸಾಂಕೇತಿಕ ಪ್ರತಿಭಟನೆ ” ಎಂದಿದ್ದರು.
ಈ ಹೇಳಿಕೆ ವಿರುದ್ಧ ಟ್ವೀಟ್ ಮಾಡುವ ಮೂಲ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆ: ನಾಲ್ಕನೇ ಸ್ಥಾನದ ಗೆಲುವಿಗೆ ಬೇಕಿದೆ ಆ ಒಂದು ಮತ; ಏನಿದು ಲೆಕ್ಕಾಚಾರ?
“ರಾವಣ ಬಾಲಕ್ಕೆ ಬೆಂಕಿ ಹಚ್ಚಿದ, ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ. ಚಡ್ಡಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ ಎಸ್ಎಸ್ ತಂಟೆಗೆ ಬರಬೇಡಿ. ಹುಷಾರ್” ಎಂದು ಈಶ್ವರಪ್ಪ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.