Advertisement

ಮಹಿಳೆಗೆ ಚಾಕು ಇರಿದು ಸರ ಅಪಹರಣಕ್ಕೆ ಯತ್ನಿಸಿದ ಕಳ್ಳರು: ಮಹಿಳೆ ಆಸ್ಪತ್ರೆಗೆ ದಾಖಲು

09:49 PM Jan 28, 2021 | Team Udayavani |

ಮಂಡ್ಯ: ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿರುವ ಘಟನೆ ತಾಲೂಕಿನ ಕೊಮ್ಮೇರಹಳ್ಳಿ ಬಳಿಯ ವಿಶ್ವಮಾನವ ಶಾಲೆಯ ಬಳಿ ಗುರುವಾರ ರಾತ್ರಿ 7.20ರಲ್ಲಿ ನಡೆದಿದೆ.

Advertisement

ತಾಲೂಕಿನ ಉಮ್ಮಡಹಳ್ಳಿ ಗ್ರಾಮದ ಪುಷ್ಪಲತಾ ಸರ ಕಳೆದುಕೊಂಡವರು. ಸಾತನೂರು ನರಸಿಂಹಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆ ಹಿನ್ನೆಲೆಯಲ್ಲಿ ಪೂಜೆ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಮಾಂಗಲ್ಯ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ಮಹಿಳೆಯು ವಿರೋಧ ವ್ಯಕ್ತಪಡಿಸಿದಾಗ ಚಾಕುವಿನಿಂದ ಹೊಟ್ಟೆಗೆ ಮೂರು ಕಡೆ ಇರಿದು ಸರ ಕಸಿದುಕೊಂಡು ಪರಾರಿಯಾಗಿದ್ದಾರೆ. ಆದರೆ ಸರ ಪಕ್ಕದ ಕಬ್ಬಿನ ಗದ್ದೆಯಲ್ಲಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಸಂತ್ರಸ್ತ ಮಹಿಳೆಯನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಡಿವೈಎಸ್ಪಿ ನವೀನ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೋಣದ ಜತೆ 9 ವರ್ಷದ ಬಾಲಕನ ಕಂಬಳ ಓಟ ಪ್ರಾಕ್ಟಿಸ್! ಕಂಬಳದಲ್ಲೇ ಸಾಧನೆ ಮಾಡಬೇಕೆಂಬ ಹಂಬಲವಂತೆ

ತಂಡ ರಚನೆ:
ಮಂಡ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಆರೋಪಿಗಳ ಪತ್ತೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next