Advertisement

ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

09:53 AM Jun 04, 2019 | Suhan S |

ಯಾದಗಿರಿ: ಜಿಲ್ಲೆಯ ನಾಲ್ಕು ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆದು ಇದೀಗ ಲೋಕಸಭೆ ಚುನಾವಣೆ ಮುಗಿದ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಮುಂದಾದಂತಿದೆ.

Advertisement

ಜಿಲ್ಲೆಯ ಯಾದಗಿರಿ ಮತ್ತು ಸುರಪುರ ನಗರಸಭೆ ಹಾಗೂ ಗುರುಮಠಕಲ್ ಪುರಸಭೆಗೆ 2018ರಲ್ಲಿ ಚುನಾವಣೆ ನಡೆದು ಸೆಪ್ಟೆಂಬರ್‌ ಮೊದಲ ವಾರದಲ್ಲಿದಲ್ಲಿಯೇ ಫಲಿತಾಂಶ ಹೊರ ಬಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿತ್ತು.

ಮೀಸಲಾತಿ ಪ್ರಕಟವಾಗಿ ಸುಮಾರು 10 ತಿಂಗಳು ಕೆಳೆದರೂ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟೆಕ್ಕೇರಲು ಗೆಲುವು ಸಾಧಿಸಿದ ಅಭ್ಯರ್ಥಿಗಳು ಕಾಯುತ್ತಿದ್ದರು, ಚುನಾವಣೆ ಹಿನ್ನೆಲೆ ನೀತಿ ಸಂಹಿತಿ ಜಾರಿಯಿಂದಾಗಿ ತೆಪ್ಪಗೆ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಇದಕ್ಕೆ ಕೆಲವರು ಮೀಸಲಾತಿ ಬದಲಾವಣೆ ಬಯಸಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನೆನೆಗುದಿಗೆ ಬಿದ್ದಿತ್ತು.

ಯಾದಗಿರಿ ನಗರಸಭೆ ಕಮಲ ಪಾಲು: ಯಾದಗಿರಿ ನಗರಸಭೆಯ 31 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟು ಕಾಂಗ್ರೆಸ್‌ 11 ಸ್ಥಾನ ತನ್ನದಾಗಿಸಿಕೊಂಡರೆ, ಬಿಜೆಪಿ 16 ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಇನ್ನು ಜೆಡಿಎಸ್‌ 3 ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಪಡೆದಿದ್ದಾರೆ. ನಗರಸಭೆ ಗದ್ದುಗೆ ಏರಲು ಬಿಜೆಪಿ ಅಣಿಯಾಗಿದ್ದು, ಶಾಸಕ ವೆಂಕಟರೆಡ್ಡಿ ಮುದ್ನಾಳ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸಿದರೆ ಒಟ್ಟು 17 ಸ್ಥಾನಗಳಾಗಲಿದ್ದು, ಕಮಲ ಗದ್ದುಗೆ ಏರುವುದು ನಿಶ್ಚಿತ.

ಸುರಪುರದಲ್ಲಿ ಅರಳಲಿದೆ ಕಮಲ: ಸುರಪುರ ನಗರಸಭೆಯ 31 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 16 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್‌ 15 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಚುನಾವಣೆಯಲ್ಲಿ ಏರ್ಪಟ್ಟ ತೀವ್ರ ಪೈಪೋಟಿಯಲ್ಲಿ ಬಿಜೆಪಿ ಒಂದು ಸ್ಥಾನ ಹೆಚ್ಚಿಗೆ ಪಡೆದಿರುವುದು ಶಾಸಕರು ಬಿಜೆಪಿಯವರು ಇರುವುದರಿಂದ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸುವ ಮೂಲಕ 17 ಸ್ಥಾನಕ್ಕೆ ತಲುಪಿ ಗದ್ದುಗೆಯನ್ನು ಭದ್ರಗೊಳಿಸಿಕೊಳ್ಳಲಿದೆ ಎನ್ನುವ ಲೆಕ್ಕಾಚಾರಲ್ಲಿದೆ.

Advertisement

ಗುರುಮಠಕಲ್ನಲ್ಲಿ ಮೈತ್ರಿ ಅಧಿಕಾರ ಹಿಡಿಯುತ್ತಾ?: ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದು, ಕೆಪಿಸಿಸಿ ಸ್ಥಳೀಯ ಸಂಸ್ಥೆಗಳಲ್ಲಿಯೂ ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದು, ಗುರುಮಠಕಲ್ ಪುರಸಭೆಯ ಒಟ್ಟು 23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 12 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಜೆಡಿಎಸ್‌ 8 ಸ್ಥಾನಗಳಲ್ಲಿ ಗೆದ್ದಿದ್ದು, ಬಿಜೆಪಿ 2 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಗೆದ್ದಿದ್ದಾರೆ. ಗುರುಮಠಕಲ್ ವಿಧಾನಸಭೆಗೆ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರ ಆಯ್ಕೆಯಾಗಿದ್ದು, ಅವರ ಪಕ್ಷದ ಅಭ್ಯರ್ಥಿ ಅಧ್ಯಕ್ಷವಾಗಲು ಅನುಕೂಲವಾಗುವಂತೆ ಅಧ್ಯಕ್ಷ ಸ್ಥಾನವನ್ನು ಬದಲಾಯಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಜೆಡಿಎಸ್‌ನಲ್ಲಿ ಅಧಿಕಾರಕ್ಕೇರುವ ಸಂಖ್ಯಾಬಲದ ಕೊರತಿಯಿರುವುದರಿಂದ ಕಾಂಗ್ರೆಸ್‌ನವರೊಂದಿಗೆ ಒಟ್ಟುಗೂಡಿ ಅಧ್ಯಕ್ಷ ಗದ್ದುಗೆ ಏರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಶಹಾಪುರನಲ್ಲಿ ಕಾಂಗ್ರೆಸ್‌ ಪಾರುಪತ್ಯ: ಇತ್ತೀಚೆಗಷ್ಟೇ ನಡೆದ ಶಹಾಪುರ ನಗರಸಭೆ 31 ಸ್ಥಾನಗಳಿಗೆ ಚುನಾವಣೆ ನಡೆದು 16 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಇಲ್ಲಿ ಬಿಜೆಪಿ 12 ಸ್ಥಾನಗಳನ್ನು ಪಡೆದಿದ್ದು, ಎಸ್‌ಡಿಪಿಐ 2 ಹಾಗೂ ಪಕ್ಷೇತರ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಒಟ್ಟಾರೆ ಜಿಲ್ಲೆಯ 4 ಸ್ಥಳೀಯ ಸಂಸ್ಥೆಗಳ ಬಲಾಬಲ ಗಮನಿಸಿದರೆ ಯಾದಗಿರಿ ಮತ್ತು ಸುರಪುರದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಲಿದ್ದು, ಗುರುಮಠಕಲ್ನಲ್ಲಿ ಮೈತ್ರಿ ಪಕ್ಷಗಳು ಅಧಿಕಾರ ಗಿಟ್ಟಿಸಿಕೊಳ್ಳಲಿವೆ. ಇನ್ನು ಶಹಾಪುರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲಿದೆ.

•ಅನೀಲ ಬಸೂದೆ

Advertisement

Udayavani is now on Telegram. Click here to join our channel and stay updated with the latest news.

Next