Advertisement

ಕಸಘಟ್ಟಪುರ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

11:35 AM Nov 29, 2017 | |

ಯಲಹಂಕ: ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟ ಹೋಬಳಿಯ ಕಸಘಟ್ಟಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹನುಮಂತರಾಯಪ್ಪ, ಉಪಾಧ್ಯಕ್ಷರಾಗಿ ಮಂಜುಳಮ್ಮ ಆಯ್ಕೆಯಾಗಿದ್ದಾರೆ.

Advertisement

ಬಿಜೆಪಿ ವಶದಲ್ಲಿದ್ದ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಚುನಾವಣೆ ನಡೆಯಿತು. ಒಟ್ಟು 32 ಸ್ಥಾನಗಳ ಪೈಕಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹನುಮಂತರಾಯಪ್ಪ 18 ಮತ ಪಡೆದರೆ, ಪ್ರತಿಸ್ಪರ್ಧಿ ಮಹೇಂದ್ರ 14 ಮತ ಪಡೆದರು.

ಇನ್ನೊಂದೆಡೆ 17 ಮತ ಪಡೆಯುವ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬ್ಯಾಲಕೆರೆ ಮಂಜುಳಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ಥಳೀಯ ಜಿ.ಪಂ ಸದಸ್ಯರಾದ ಗಂಗಲಕ್ಷ್ಮಮ್ಮ ರಂಗಸ್ವಾಮಿ, ತಾ.ಪಂ ಮಾಜಿ ಉಪಾಧ್ಯಕ್ಷ ಚಾಂದ್‌ ಪಾಷ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next