Advertisement

Belagavi ಸುವರ್ಣ ವಿಧಾನಸೌಧಕ್ಕೆ ಸಭಾಪತಿ, ಸ್ಪೀಕರ್ ಭೇಟಿ, ಪರಿಶೀಲನೆ

08:54 PM Mar 19, 2024 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸುವರ್ಣ ವಿಧಾನಸೌಧದ ನಿರ್ವಹಣೆಯಲ್ಲಿ ಈ ಹಿಂದೆ ಕಂಡುಬಂದಿದ್ದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲು ನೀಡಲಾಗಿರುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ವಿಧಾನಮಂಡಲದ ಚಳಿಗಾಲ ಅದಿವೇಶನದ ಸಂದರ್ಭದಲ್ಲಿ ಪರಿಷತ್ ಹಾಗೂ ವಿಧಾನಸಭೆಯ ಸಭಾಂಗಣ ನಿರ್ವಹಣೆಯ ಕುರಿತು ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದರು.

ಡಿಸೆಂಬರ್‌ದಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಯಶಸ್ಸಿಗೆ ವಿವಿಧ ಸಮಿತಿಗಳ ಮುಖ್ಯಸ್ಥರು ಹಾಗೂ ಸದಸ್ಯರುಗಳು ಶ್ರಮಿಸುವ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಭಾಪತಿ ಹೊರಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾದಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅದಿಕಾರಿಗಳು ಯಾವುದೇ ಅನಾನುಕೂಲ ಆಗದಂತೆ ಅದಿವೇಶನವನ್ನು ಯಶಸ್ವಿಯಾಗಿ ನಡೆಸಿದ್ದು, ಅವರೆಲ್ಲರೂ ಅಭಿನಂದನಾರ್ಹರು ಎಂದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕರ್ನಾಟಕ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನಸಭೆ ಕಾರ್ಯದರ್ಶಿ ಮಹಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಅದೀಕ್ಷಕ ಎಂಜಿನಿಯರ್ ಅರುಣಕುಮಾರ್ ಪಾಟೀಲ ಉಪಸ್ಥಿತರಿದ್ದರು.

ಇದನ್ನೂ ಓದಿ: Mangaluru: ಲೋಕಸಭಾ ಚುನಾವಣೆ ಹಿನ್ನೆಲೆ… ಮೂವರ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ

Advertisement

Udayavani is now on Telegram. Click here to join our channel and stay updated with the latest news.

Next