Advertisement

ಮೇಲ್ಮನೆ ಸಭಾಪತಿ ಡಿಎಚ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ!

03:49 PM May 30, 2017 | Sharanya Alva |

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ನೋಟಿಸ್ ನೀಡಲಾಗಿದೆ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ವಿಎಸ್ ಉಗ್ರಪ್ಪ ಮಂಗಳವಾರ ತಿಳಿಸಿದ್ದಾರೆ.

Advertisement

ಡಿಎಚ್ ಶಂಕರಮೂರ್ತಿ ಅವರು ಬಿಜೆಪಿ ಪ್ರತಿನಿಧಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅವರ ಕಾರ್ಯವೈಖರಿ ಅಸಮಾಧಾನ ತಂದಿದೆ. ಶಂಕರಮೂರ್ತಿ ಅವರ ವಿರುದ್ಧದ ಅವಿಶ್ವಾಸ ನಿರ್ಣಯವನ್ನು 14 ದಿನದೊಳಗೆ ಸದನದಲ್ಲಿ ವಿಷಯ ಪ್ರಸ್ತಾಪವಾಗಲಿದೆ ಎಂದರು.

ಸಭಾಪತಿ ಸ್ಥಾನದಿಂದ ಪದಚ್ಯುತಿಗೊಳಿಸುತ್ತಿರುವ ಬಗ್ಗೆ ಕಾರಣಗಳನ್ನು ಸದನದ ಮುಂದಿಡಲಾಗುವುದು. ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆಯ ಕೊರತೆ ಇದೆಯಲ್ಲ ಎಂಬ ಪ್ರಶ್ನೆಗೆ, ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಸದಸ್ಯರ ಬಲಾಬಲಾ ಗೊತ್ತಾಗಲಿದೆ ಎಂದು ಉಗ್ರಪ್ಪ ಮಾರ್ಮಿಕವಾಗಿ ಹೇಳಿದರು.

ನನ್ನ ಸ್ಥಾನಕ್ಕೆ ಯಾವುದೇ ಧಕ್ಕೆ ಆಗಲ್ಲ: ಡಿಎಚ್ ಶಂಕರಮೂರ್ತಿ
ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಕುರಿತು ನೋಟಿಸ್ ನೀಡುವ ವಿಚಾರದ ಕುರಿತಂತೆ ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ಡಿಎಚ್ ಶಂಕರಮೂರ್ತಿ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನ ಸ್ಥಾನಕ್ಕೆ ಯಾವುದೇ ಧಕ್ಕೆ ಆಗಲ್ಲ ಎಂದು ತಿಳಿಸಿದ್ದಾರೆ. ಅವಿಶ್ವಾಸ ನಿರ್ಣಯದ ಬಗ್ಗೆ ಈಗಷ್ಟೇ ತಿಳಿದು ಬಂದಿದೆ. ನೋಟಿಸ್ ನೀಡಿದ್ದರ ಬಗ್ಗೆ ನನಗೆ ಯಾವುದೇ ಆಕ್ಷೇಪಣೆ ಇಲ್ಲ. ಯಾರು ಬೇಕಾದರೂ ನೋಟಿಸ್ ನೀಡಬಹುದು. ನಾನು ಬಿಜೆಪಿ, ಜೆಡಿಎಸ್ ಒಡಂಬಡಿಕೆಯಿಂದ ಮೇಲ್ಮನೆ ಸಭಾಪತಿ ಆಗಿದ್ದೇನೆ. ನಿಯಮ 165ರ ಪ್ರಕಾರ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next