Advertisement

ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

08:14 PM Feb 04, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.

Advertisement

2018 ಡಿ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ವಿಧಾನಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜಿನಾಮೆ ಸಲ್ಲಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ರಾಜಿನಾಮೆ ಸಲ್ಲಿಸಲು ಸಹಮತ ದೊರೆತಿತ್ತು.

ಇಂದು 10 ನಿಮಿಷಗಳ ವಿದಾಯ ಭಾಷಣದ ನಂತರ ರಾಜೀನಾಮೆ ನೀಡಿ, ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು.

ಸಂಖ್ಯಾಬಲಾಬಲದ ಮೇಲೆ ಸಭಾಪತಿಯ ಆಯ್ಕೆ ನಡೆದುಕೊಂಡು ಬರುತ್ತದೆ. ತಾಂತ್ರಿಕವಾಗಿ ನಾನು ಸಭಾಪತಿಯಾಗಿ ಮುಂದುವರಿಯಲು ಅವಕಾಶವಿದೆ. ಆದರೆ, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವುದರಿಂದ ಪೀಠಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಈ  ವೇಳೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next