Advertisement
ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಳೆದ ಕೆಲ ದಿನಗಳ ಹಿಂದಷ್ಟೇ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಶೋಭಾ ಶೆಟ್ಟಿ ಅವರು ಅರ್ಧದಲ್ಲೇ ಆಚೆ ಬಂದಿದ್ದರು. ಅನಾರೋಗ್ಯ ಕಾರಣ ಕೊಟ್ಟ ಸ್ವತಃ ತಾವೇ ಆಚೆ ಹೋಗುವುದಾಗಿ ಶೋಭಾ ಹೇಳಿದ್ದರು. ಇದಕ್ಕೆ ಬಿಗ್ ಬಾಸ್ ಅನುಮತಿ ಕೊಟ್ಟಿದ್ದು, ಈಗಾಗಲೇ ಶೋಭಾ ಅವರು ಆಚೆ ಬಂದಿದ್ದಾರೆ.
Related Articles
Advertisement
ಟಿಕೆಟ್ ವಂಚನೆ ಸಂಬಂಧ ಪ್ರಕರಣ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಚೈತ್ರಾ ಸೇರಿದಂತೆ ಶ್ರೀಕಾಂತ್, ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಸ್ವಾಮೀಜಿಯ ಹೆಸರು ಕೂಡ ಕೇಳಿ ಬಂದಿತ್ತು.
ಇತ್ತೀಚೆಗೆ ವಿಚಾರಣೆಗೆ ಹಾಜರಾಗಬೇಕೆನ್ನುವ ವಾರೆಂಟ್ ಬಂದಿತ್ತು. ಈ ಕಾರಣದಿಂದ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರ ನೇರವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ.
ಸದ್ಯ ವಿಚಾರಣೆಯನ್ನು ಕೋರ್ಟ್ ಜನವರಿ 13ಕ್ಕೆ ಮುಂದೂಡಿದೆ. ಚೈತ್ರಾ ಅವರು ವಿಚಾರಣೆ ವೇಳೆ ಯಾರೊಂದಿಗೂ ಮಾತನಾಡಿಲ್ಲ ಎನ್ನಲಾಗಿದ್ದು, ಅಲ್ಲಿಂದ ಅವರು ನೇರವಾಗಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ.
ಕಳೆದ ಸೀಸನ್ನಲ್ಲಿ ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ವರ್ತೂರು ಸಂತೋಷ್ ಅವರು ಜೈಲಿಗೆ ಹೋಗಿ ಕೆಲ ದಿನಗಳ ಬಳಿಕ ಬಿಗ್ ಬಾಸ್ ಮನೆಗೆ ಬಂದಿದ್ದರು.