Advertisement
ಶನಿವಾರ ಪಟ್ಟಣಕ್ಕೆ ಭೇಟಿ ನೀಡಿದ ನಾರಾಯಣಸ್ವಾಮಿ, ಅಂಬೇಡ್ಕರ್ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಂಬೇಡ್ಕರರು ವಾಸವಿದ್ದ ಪಂಚಕ್ಷೇತ್ರಗಳ ಅಭಿವೃದ್ಧಿಗೆ ಪ್ರಧಾನಿ ಮೋದಿಯವರು ಹೇಗೆ ಶ್ರಮಿಸಿದ್ದಾರೋ ಅದೇ ಮಾದರಿಯಲ್ಲಿ ಬಾಬಾಸಾಹೇಬರು ಭೇಟಿ ನೀಡಿದ ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿ ನಗರ, ಕೋಲಾರದ ಕೆಜಿಎಫ್, ಬೆಂಗಳೂರು, ಹಾಸನ, ದಾರವಾಡ, ವಿಜಯಪುರ, ಬೆಳಗಾವಿ ಸ್ಥಳಗಳನ್ನು ರಾಷ್ಟçಮಟ್ಟದಲ್ಲಿ ಗುರುತಿಸುವಂತೆ ಅಭಿವೃದ್ಧಿಪಡಿಸಲು ನಾನು ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೆ. ಪರಿಣಾಮ ಮುಖ್ಯಮಂತ್ರಿಗಳು ಏಳು ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಅಗತ್ಯಬಿದ್ದರೆ 100 ಕೋಟಿಗೂ ಹೆಚ್ಚು ಅನುದಾನ ನೀಡುತ್ತಾರೆಂಬ ಭರವಸೆಯಿದೆ. ಆಯಾ ಸ್ಥಳೀಯ ಮುಖಂಡರ ಅಭಿಪ್ರಾಯದಂತೆ ಸರ್ಕಾರವೇ ಈ ಕ್ಷೇತ್ರಗಳನ್ನು ಸೋಷಿಯಲ್ ವೆಲ್ಫರ್ ಮೂಲಕ ಅಭಿವೃದ್ಧಿಪಡಿಸಲಿದೆ. ಒಟ್ಟಾರೆ ಅಂಬೇಡ್ಕರ್ ಪಾದ ಸ್ಪರ್ಷಿಸಿದ ರಾಜ್ಯದ ಜಾಗಗಳಲ್ಲಿ ಸ್ಮಾರಕ, ವಿದ್ಯಾಮಂದಿರ, ಧ್ಯಾನಕೇಂದ್ರ, ಗ್ರಂಥಾಲಯ, ಭವನಗಳ ನಿರ್ಮಾಣ ಕಾರ್ಯ ಸ್ಥಳೀಯ ಮುಖಂಡರ ಸಲಹೆಗಳ ಮೆರೆಗೆ ನಡೆಯಲಿದೆ ಎಂದು ವಿವರಿಸಿದರು.
Related Articles
Advertisement
ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ, ಭಾಜಪ ನಗರ ಶಕ್ತಿಕೇಂದ್ರ ಅಧ್ಯಕ್ಷ ಶಿವರಾಮ ಪವಾರ, ಪ್ರಧಾನ ಕಾರ್ಯದರ್ಶಿ ರಾಹುಲ ಸಿಂಧಗಿ, ತಾಲೂಕು ಉಪಾಧ್ಯಕ್ಷರಾದ ಗಿರಿಮಲ್ಲಪ್ಪ ಕಟ್ಟಿಮನಿ, ವೀರಣ್ಣ ಯಾರಿ, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಮುಖಂಡರಾದ ವಿಠ್ಠಲ ವಾಲ್ಮೀಕಿ ನಾಯಕ, ಆನಂದ ಇಂಗಳಗಿ, ವಿಶಾಲ ನಿಂಬರ್ಗಾ, ದೌಲತರಾವ ಚಿತ್ತಾಪುರಕರ, ಭೀಮಶಾ ಜಿರೊಳ್ಳಿ, ಸಿದ್ದಣ್ಣ ಕಲಶೆಟ್ಟಿ, ಕಿಶನ ಜಾಧವ, ರವಿ ನಾಯಕ, ಹರಿ ಗಲಾಂಡೆ ಪಾಲ್ಗೊಂಡಿದ್ದರು.