Advertisement

Legislative Council ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

10:39 PM Jul 22, 2024 | Team Udayavani |

ಬೆಂಗಳೂರು: ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು  ನೇಮಿಸಿದ್ದಾರೆ.

Advertisement

ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಕೋಟ  ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾಗಿ ಆಯ್ಕೆಯಾದ ನಂತರ ಈ ಸ್ಥಾನ ತೆರವುಗೊಂಡಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯ ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿಯವರನ್ನು ಮೇಲ್ಮನೆಗೆ ಇತ್ತೀಚೆಗೆ  ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನದ ಜವಾಬ್ದಾರಿ ಅಧಿಕೃತಗೊಳಿಸಿರಲಿಲ್ಲ.

ಇದೀಗ ಮುಂಗಾರು ಅಧಿವೇಶನ ಮಧ್ಯಯೇ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿಯವರ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ  ನೇಮಕ ಮಾಡಿದೆ. ಇದರಿಂದ ವಿಪಕ್ಷ ನಾಯಕನ ಹುದ್ದೆ ಆಕಾಂಕ್ಷಿಗಳಾಗಿದ್ದ ಸಿ.ಟಿ. ರವಿ ಮತ್ತು ರವಿ ಕುಮಾರ್ ಗೆ ನಿರಾಸೆಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next