Advertisement

ಕೋವಿಡ್ ನಿಯಂತ್ರಣಕ್ಕೆ ಯತ್ನ: ಡಾ|ಪ್ರೇಮಸುಧಾ

07:05 PM Jun 13, 2020 | Naveen |

ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಾಕಷ್ಟು ಪರಿಶ್ರಮ ವಹಿಸಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್‌ನಲ್ಲಿ 23 ಜನ ಕೋವಿಡ್ ಪಾಸಿಟಿವ್‌ ಸೋಂಕಿತ ವ್ಯಕ್ತಿಗಳಿದ್ದು, ಅವರೂ ಸಹ ಗುಣಮುಖರಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಎನ್‌. ಪ್ರೇಮಸುಧಾ ತಿಳಿಸಿದ್ದಾರೆ.

Advertisement

ಕೋವಿಡ್ ವೈರಾಣು ಯಾವ ಸಂದರ್ಭದಲ್ಲಿ ಯಾವ ರೀತಿ ಹಬ್ಬುತ್ತದೆ ಎಂಬ ಬಗ್ಗೆ ಖಚಿತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಕೆಲವೊಮ್ಮೆ ದಿಢೀರನೇ ಈ ವೈರಾಣು ಹಲವಾರು ಜನರಿಗೆ ಹಬ್ಬುವ ಮೂಲಕ ಜನರಲ್ಲಿ ಆತಂಕವನ್ನುಂಟು ಮಾಡುತ್ತದೆ. ಹೋಂ ಕ್ವಾರಂಟೈನ್‌ನಲ್ಲಿರುವ ಪಾಸಿಟಿವ್‌ ವ್ಯಕ್ತಿಗಳ ಎರಡನೇ ಹಂತದ ಗಂಟಲು ದ್ರವ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ಫಲಿತಾಂಶ ಬರಲಿದೆ. ನಂತರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಾಲೂಕು ಆಡಳಿತದ ಸಹಕಾರದೊಂದಿಗೆ ಅವರ ಆರೋಗ್ಯ ಸುಧಾರಣೆಯಾದಲ್ಲಿ ಮಾತ್ರ ಮೂಲ ಸ್ಥಳವಾದ ಉತ್ತರ ಪ್ರದೇಶಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ತಾಲೂಕಿನಾದ್ಯಂತ ಕೋವಿಡ್ ವೈರಾಣು ಜಾಗೃತಿ ಮೂಡಿಸುವಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ಸಿಬ್ಬಂದಿ ವರ್ಗ, ವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು ಕಾರ್ಯ ನಿರ್ವಹಿಸಿವೆ. ಇದರಿಂದ ಕೋವಿಡ್ ವೈರಾಣು ನಿಯಂತ್ರಣ ಸಾಧ್ಯವಾಗಿದೆ. ತಾಲೂಕಿನಾದ್ಯಂತ ಸುಮಾರು 250ಕ್ಕೂ ಹೆಚ್ಚು ಜನರು ಹೋಂ ಕ್ವಾರಂಟೈನ್‌ ನಲ್ಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡಿದ ಜಿಲ್ಲಾ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next