Advertisement
ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮದ ಚೆಲುಮೆರುದ್ರಸ್ವಾಮಿ ಮಠದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರೈತರೊಂದಿಗೆ ಸಂವಾದ ಹಾಗೂ ಎಸ್‌ಜೆಎಂ ಪ್ರಾಥಮಿಕ ಶಾಲೆಯ ನೂತನ ಕಟ್ಟಡಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶರಣರು ಆಶೀರ್ವಚನ ನೀಡಿದರು.
Related Articles
ವಿಚಾರದಲ್ಲೂ ಬೇರೆ ಎಲ್ಲಾ ಶಾಸಕರಿಗಿಂತ ಹೆಚ್ಚು ಪ್ರಗತಿ ಸಾಧಿ ಸಿದ್ದಾರೆ ಎಂದು ಶ್ಲಾಘಿಸಿದರು.
Advertisement
ಶಾಸಕ ಟಿ. ರಘುಮೂರ್ತಿ ಮಾತನಾಡಿ, ನನ್ನನ್ನು ಎರಡನೇ ಬಾರಿ ಚಳ್ಳಕೆರೆ ಕ್ಷೇತ್ರದ ಶಾಸಕನನ್ನಾಗಿ ಆಯ್ಕೆ ಮಾಡುವ ಮೂಲಕ ಇಲ್ಲಿನ ಮತದಾರರು ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ನಾನು ಮೊದಲ ಅವ ಧಿಯಲ್ಲಿ ಶಾಸಕನಾಗಿ ಕ್ಷೇತ್ರಕ್ಕೆ ಸುಮಾರು ಮೂರು ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಮತದಾರರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿದ್ದೇನೆ.
ಮೊದಲ ಅವ ಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಚ್. ಆಂಜನೇಯ ಹೆಚ್ಚು ಸಹಕಾರ ನೀಡಿದ್ದಾರೆ ಎಂದರು. ರೈತ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಮಾತನಾಡಿ, ಮೊದೂರು, ಲಕ್ಕಗೊಂಡನಹಳ್ಳಿ ಮಧ್ಯಭಾಗದಲ್ಲಿ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸಬೇಕು. ಇದರಿಂದ ಆ ಭಾಗದ 30 ಗ್ರಾಮಗಳ ಸುಮಾರು 30 ಸಾವಿರ ಎಕರೆ ಪ್ರದೇಶಗಳಿಗೆ ನೀರಿನ ಸೌಲಭ್ಯ ದೊರೆಯುತ್ತದೆ. ಕ್ಷೇತ್ರದ ಶಾಸಕರು ರೈತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಬ್ಯಾರೇಜ್ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ, ಸದಸ್ಯರಾದ ರಂಜಿತಾ,ಉಮಾ ಜನಾರ್ದನ, ಸಮರ್ಥರಾಯ, ಜಿ. ವೀರೇಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಭೀಮಕ್ಕ, ರೈತ ಸಂಘದ ರಾಜ್ಯ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ, ಪ್ರಗತಿಪರ ರೈತ ದಯಾನಂದಮೂರ್ತಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಶ್ರೀ ಬಸವಕಿರಣ ಸ್ವಾಮೀಜಿ, ತೋಟಗಾರಿಕೆ ಅಧಿ ಕಾರಿ ವಿರೂಪಾಕ್ಷಪ್ಪ, ನಗರಸಭಾ ಸದಸ್ಯ ರಮೇಶ್ ಗೌಡ, ಟಿ. ಮಲ್ಲಿಕಾರ್ಜುನ, ವಿರೂಪಾಕ್ಷ, ಗೀತಾಬಾಯಿ, ಪಾಲಯ್ಯ, ಸೈಯದ್ ಪಾಲ್ಗೊಂಡಿದ್ದರು.