Advertisement

ಹೊರ ರಾಜ್ಯದವರ ಮೇಲೆ ನಿಗಾ ಇಡಿ

05:01 PM May 11, 2020 | Naveen |

ಚಳ್ಳಕೆರೆ: ತಾಲೂಕು ಆಡಳಿತ, ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರಂತರ ಪರಿಶ್ರಮದ ನಡುವೆಯೂ ಕೋವಿಡ್ ವೈರಾಣುವಿನ ಸಂಪೂರ್ಣ ನಿಯಂತ್ರಣ ಸಾಧ್ಯವಾಗಲಿಲ್ಲ. ಹಾಗಾಗಿ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಶಾಸಕ ಟಿ. ರಘುಮೂರ್ತಿಸೂಚಿಸಿದರು.

Advertisement

ಭಾನುವಾರ ತಾಲೂಕು ಕಚೇರಿ ಆವರಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಆರು ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಹೊರ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳ ಮೇಲೆ ನಿಗಾ ಇಡಬೇಕು. ಯಾರೇ ಆಗಮಿಸಿದರೂ ಕಡ್ಡಾಯವಾಗಿ ಅವರನ್ನು ಕ್ವಾರಂಟೈನ್‌ನಲ್ಲಿಡಬೇಕು. ಯಾವುದೇ ಸಂದರ್ಭದಲ್ಲೂ ಅಧಿಕಾರಿಗಳು ನಿಯಮಗಳ ಸಡಿಲಿಕೆಗೆ ಮುಂದಾಗಬಾರದು ಎಂದರು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ ಮಾತನಾಡಿ, ಜಿಲ್ಲಾ ಧಿಕಾರಿಗಳ ನಿರ್ದೇಶನದಂತೆ ನಗರದ ಹೊರಭಾಗದಲ್ಲಿ ಹೊಸದಾಗಿ 10 ಕ್ವಾರಂಟೈನ್‌ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ ಮಾತನಾಡಿ, ತಾಲೂಕಿನ ಗಡಿ ಭಾಗದಲ್ಲಿ ವೈದ್ಯಕೀಯ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದರು.  ತಾಪಂ ಇಒ ಡಾ| ಶ್ರೀಧರ್‌ ಬಾರಕೇರ್‌, ಪೌರಾಯುಕ್ತ ಪಾಲಯ್ಯ, ವಿವಿಧ ಆರೋಗ್ಯ ಕೇಂದ್ರಗಳ ವೈದ್ಯರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next