Advertisement

15ರಂದು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

01:31 PM Aug 11, 2019 | Naveen |

ಚಳ್ಳಕೆರೆ: ಕಡುಬಡವರು ಮತ್ತು ಮಧ್ಯಮ ವರ್ಗದ ಜನ ಅತಿ ಕಡಿಮೆ ದರದಲ್ಲಿ ಉಪಾಹಾರ ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ 2 ವರ್ಷಗಳ ಹಿಂದೆ ಜಾರಿಗೆ ತಂದ ಇಂದಿರಾ ಕ್ಯಾಂಟಿನ್‌ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಆ.15ರಂದು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಪೌರಾಯುಕ್ತ ಜೆ.ಟಿ. ಹನುಮಂತರಾಜು ಹೇಳಿದರು.

Advertisement

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆವರವಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್‌ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೌರಾಡಳಿತ ಇಲಾಖೆ ಎಸ್‌ಎಫ್‌ಸಿ ಯೋಜನೆಯಲ್ಲಿ ಈ ಕಾಮಗಾರಿ ಹಮ್ಮಿಕೊಂಡಿದೆ. ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಒಳಭಾಗದಲ್ಲಿ ವಿಶೇಷ ತಂತ್ರಜ್ಞಾನದಿಂದ ಕೂಡಿದ ಅಡುಗೆ ವಿಶೇಷ ಕೌಂಟರ್‌ಅನ್ನು ನಿರ್ಮಿಸಲಾಗುತ್ತಿದೆ ಎಂದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ನೀಡುವ ನಿಟ್ಟಿನಲ್ಲಿ ಪ್ಲಿಲ್ಟರ್‌ ವ್ಯವಸ್ಥೆ, ತಿಂಡಿ, ಊಟ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೊಳಚೆ ನೀರು, ಬಳಕೆ ನೀರು ಇಂಗಿಸಲು ಇಂಗು ಗುಂಡಿ ನಿರ್ಮಿಸಲಾಗಿದೆ.

ಆ.15ರಂದು ಇಂದಿರಾ ಕ್ಯಾಂಟೀನ್‌ಅನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಟಿ. ರಘುಮೂರ್ತಿ ವಹಿಸಲಿದ್ದು, ಲೋಕಸಭಾ ಸದಸ್ಯ ಎ.ನಾರಾಯಣಸ್ವಾಮಿ ನೂತನ ಕ್ಯಾಂಟೀನ್‌ಅನ್ನು ಉದ್ಘಾಟಿಸುವರು. ಚುನಾಯಿತ ಜನಪ್ರತಿನಿಧಿಗಳು, ನಗರಸಭಾ ಸದಸ್ಯರು, ತಾಲ್ಲೂಕು ಮಟ್ಟದ ಅಧಿಕಾರಿಗಳು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಬಿ.ಟಿ. ರಮೇಶ್‌ಗೌಡ, ಎಇಇ ವಿನಯ್‌, ಸಹಾಯಕ ಇಂಜಿನಿಯರ್‌ ಲೋಕೇಶ್‌, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next