Advertisement

ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರವಿನ್ನು ಕೋವಿಡ್‌-19 ಆಸ್ಪತ್ರೆ

04:54 PM Apr 27, 2020 | Naveen |

ಚಳ್ಳಕೆರೆ: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ನಿರ್ದೇಶನದ ಮೇರೆಗೆ ತಾಲೂಕಿನ ಗಡಿ ಭಾಗದಲ್ಲಿರುವ ಪರಶುರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್‌-19 ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ.

Advertisement

ಏ. 27 ರಿಂದ ಇಲ್ಲಿ ಕೋವಿಡ್ ವೈರಾಣುವಿಗೆ ಸಂಬಂಧಪಟ್ಟ ಚಿಕಿತ್ಸೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ ತಿಳಿಸಿದ್ದಾರೆ. ಕೋವಿಡ್‌-19 ಚಿಕಿತ್ಸಾ ಕೇಂದ್ರದ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಧ್ರ ಪ್ರದೇಶದ ಗಡಿ ವ್ಯಾಪ್ತಿಯ ಅನೇಕ ಗ್ರಾಮಗಳ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಈ ಭಾಗದಲ್ಲಿ ಕೋವಿಡ್ ವೈರಾಣು ಪೀಡಿತ ವ್ಯಕ್ತಿಗಳಿದ್ದಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಬೇಕಿತ್ತು. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಪರಶುರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌-19 ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ಡಿ. ಚಿದಾನಂದ, ಹಿರಿಯ ಫಾರ್ಮಾಸಿಸ್ಟ್‌ ಎನ್‌. ಪ್ರೇಮಕುಮಾರ್‌, ತಿಪ್ಪೇಸ್ವಾಮಿ, ಡಾ| ರಮೇಶ್‌, ಡಾ| ಸೋನಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next