Advertisement

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಕೈಜೋಡಿಸಲು ಮನವಿ

04:32 PM Jun 05, 2020 | Naveen |

ಚಳ್ಳಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಲು ಇನ್ನೂ ಕೇವಲ 20 ದಿನಗಳು ಮಾತ್ರ ಬಾಕಿ ಇದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌. ಸುರೇಶ್‌ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ಧಾರೆ.

Advertisement

ತಾಲೂಕಿನ ಗಡಿಭಾಗದಲ್ಲಿರುವ ಪಾತಪ್ಪನಗುಡಿ, ಓಬಳಾಪುರ, ರೇಣುಕಾಪುರ, ಘಟಪರ್ತಿ, ಗೌರಸಮುದ್ರ, ತಳಕು, ಚಿತ್ರನಾಯಕನಹಳ್ಳಿ, ದೊಡ್ಡ ಉಳ್ಳಾರ್ತಿ ಗ್ರಾಮಗಳ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.

ಪರೀಕ್ಷಾ ಕೇಂದ್ರಗಳ ಮೂಲ ಸೌಕರ್ಯಗಳ ಬಗ್ಗೆಯೂ ಸಹ ಪರಿಶೀಲನೆ ನಡೆಸಿದರಲ್ಲದೆ, ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್‌, ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಶೌಚಾಲಯ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸಬೇಕು. ಈ ಬಾರಿಯ ಫಲಿತಾಂಶದ ಗುರಿ ಸಾಧಿಸಲು ಎಲ್ಲರೂ ಸಹಕರಿಸಬೇಕು ಎಂದರು. ಮುಖ್ಯೋಪಾಧ್ಯಾಯರಾದ ಪಾಲಯ್ಯ, ಕೆ. ಎ. ಮೂರ್ತಪ್ಪ, ಸುಬಾನ್‌ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next