Advertisement
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರು, ಫ್ರೀಡಂ ಪಾರ್ಕ್ ಬಳಿ ಇರುವ ಮಹಾರಾಣಿ ಕಾಲೇಜು ಸರ್ಕಲ್ ವರೆಗೆ ಬೃಹತ್ ಮೆರವಣಿಗೆ ನಡೆಸಿದರು.
Related Articles
Advertisement
ಹಿಂದೆ ವಾಲ್ಮೀಕಿ ಸಮುದಾಯಕ್ಕಾಗಿ ಮೀಸಲಿಟ್ಟಿದ್ದ ಹಣದಲ್ಲಿ ಶೇ.70ರಷ್ಟು ಅನುದಾನವನ್ನು ಪುನಃ ಸೇರಿಸಿ ಈ ಬಾರಿಯ ಬಜೆಟ್‌ನಲ್ಲಿ ಸೇರಿಸಿ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಬೇಕು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ತಕ್ಷಣ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ನಾಯಕ ಸಮಾಜದ ಸಮಾನ ಮನಸ್ಕರು ಹಾಗೂ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ರಮೇಶ್ ಹಿರೇಜಂಬೂರು ಆಗ್ರಹಿಸಿದರು.
ಪರಿಶಿಷ್ಟ ಪಂಗಡ ಸಮುದಾಯದ ಆದಿ ಕವಿ, ವಾಲ್ಮೀಕಿ ಸೃಷ್ಟಿಸಿದ ರಾಮನನ್ನು ಇಡೀ ಜಗತ್ತೇ ಈಗ ಪೂಜಿಸುತ್ತಿದೆ. ಆದರೆ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿಯನ್ನು ಕಡೆಗಣಿಸಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದ ಎದುರು ವಾಲ್ಮೀಕಿ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ನಾಯಕ ಸಮಾಜದ ಸಮಾನ ಮನಸ್ಕರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ರಮೇಶ್ ಹಿರೇಜಂಬೂರು, ತುಮಕೂರಿನ ಭರತ್, ಜಯಸಿಂಹ, ಮಾರಣ್ಣ ಪಾಳೇಗಾರ, ಕುಪ್ಪೂರು ಶ್ರೀಧರ್, ಸಿಂಹ ಘರ್ಜನೆ ವೇದಿಕೆಯ ಮಾಲೂರು ವೆಂಕಟೇಶ್, ಪರಶುರಾಮ್, ಭಾರತಿ, ರಾಯಚೂರಿನ ಶರಣಬಸಪ್ಪ, ರಜನಿ ಎಂ.ಆರ್., ನೆಲಮಂಗಲದ ಅಶೋಕ್, ರವಿ ವಾಲ್ಮೀಕಿ ಸೇರಿದಂತೆ ರಾಜ್ಯ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮುಖಂಡರು ಭಾಗವಹಿಸಿದ್ದರು