Advertisement
ಚಾಮರಾಜನಗರ ಪಟ್ಟಣದ ಗಾಳಿಪುರ ಬಡಾವಣೆಯ ಹಾಲಿ ಸರಗೂರಿನಲ್ಲಿ ವಾಸವಾಗಿರುವ ಶಮಿವುಲ್ಲಾ ಅಲಿಯಾಸ್ ಡಾಮ್ಟೆ, ಅಲಿಯಾಸ್ ಸಲ್ಮಾನ್ ಅಲಿಯಾಸ್ ಪ್ರೀತಮ್ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ. ಈತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಸಂಬಂಧ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಆರೋಪಿ ವಿರುದ್ದ ದೋಷಾರೋಪಣ ಪತ್ರ ಸಲ್ಲಿಸಿದ್ದರು.
Related Articles
Advertisement
ಅಪ್ರಾಪ್ತ ಬಾಲಕಿ ಮೇಲೆ ಎಸಗಿರುವ ಕೃತ್ಯವು ರುಜುವತಾಗಿದೆ ಎಂದು ತೀರ್ಮಾನಿಸಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಸುಲ್ತಾನ್ ಪುರಿ ಅವರು ಆರೋಪಿಗೆ ಕಲಂ 366 ಐಪಿಸಿ ಅನ್ವಯ 5 ವರ್ಷ ಸಜೆ ಮತ್ತು 50 ಸಾವಿರ ರೂ ದಂಡ ಮತ್ತು ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ, ಕಲಂ 376 (ಎನ್) ಐಪಿಸಿ ಅನ್ವಯ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಜೆ ವಿಧಿಸಿದ್ದಾರೆ. ಅಲ್ಲದೇ ಪೋಕ್ಸೊ ಕಾಯ್ದೆ ಕಲಂ 4ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ, ಪೋಕ್ಸೊ ಕಾಯ್ದೆ ಕಲಂ 6ರ ಪ್ರಕಾರ 10 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ ದಂಡ ಹಾಗೂ ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆಯನ್ನು ವಿಧಿಸಿದ್ದಾರೆ. ಅಲ್ಲದೇ ಕಲಂ ಎಸ್‌ಸಿ, ಎಸ್‌ಟಿ ಕಾಯ್ದೆ ಅನುಸಾರ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ಮತ್ತು ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ CM ಆಗಲಿ ಎಂಬುದು ವೈಯಕ್ತಿಕ ಅಭಿಪ್ರಾಯ; ನೊಟೀಸ್ ಕೊಟ್ರೆ ಉತ್ತರಿಸುತ್ತೇನೆ !