Advertisement

ಚಾಮರಾಜನಗರ ಡಿಸಿ ಸರಿಯಾಗಿ ಆಕ್ಸಿಜನ್ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ : ರೋಹಿಣಿ ನಿಂಧೂರಿ

02:38 PM May 05, 2021 | Team Udayavani |

ಮೈಸೂರು : ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ ಇದರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿದ್ದಾರೆ.

Advertisement

ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಅಷ್ಟು ಕೆಲಸ ಮಾಡಿದರೂ ಈ ರೀತಿ ಆರೋಪ ಮಾಡಿದರೆ ನೋವಾಗುತ್ತದೆ‌ ಎಂದು ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಡಿಸಿ ಎಂ.ಆರ್.ರವಿ ವಿರುದ್ಧ ಮಾತನಾಡಿರುವ ಸಿಂಧೂರಿ, ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವಾ ಬೇರೆ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ ಎಂದುದ್ದಾರೆ.

ಜಿಲ್ಲೆಗಳಿಗೆ ಆಕ್ಸಿಜನ್ ಸರಬರಾಜು ವಿಚಾರ ಅಲ್ಲಿನ ಜಿಲ್ಲಾಡಳಿತಕ್ಕೆ ಸಂಬಂಧಿಸಿರುತ್ತದೆ. ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನು ದೂಷಿಸಲು ಸಾಧ್ಯವಿಲ್ಲ. ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೇ ಜವಾಬ್ದಾರಿ ಎಂದು ತಿಳಿಸಿದ್ದಾರೆ.

ಆಕ್ಸಿಜನ್ ನಿರ್ವಹಣೆಯಲ್ಲಿ ವಿಫಲರಾಗಿರುವ ಚಾಮರಾಜನಗರದವರು ಮೈಸೂರಿನ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೆಲ್ಲವು ಸಾಬೀತಾಗಲಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.ಈ ಜೊತೆಗೆ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ ಬಿಡುಗಡೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next