Advertisement

Chamarajanagar; ವಯಸ್ಕ ಹಾಗೂ ಮರಿ ಹುಲಿ ಕೊಳೆತ ಶವ ಪತ್ತೆ: ಹಲವು ಅನುಮಾನಗಳು..

04:53 PM Dec 08, 2023 | Team Udayavani |

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಸಮೀಪದ ಮೇಲೂರು ಗ್ರಾಮದ ಕರಿಕಲ್ಲು ಕ್ವಾರಿ ಬಳಿಯ ಪಾಳು ಬಿದ್ದಿರುವ ಜಮೀನಿನಲ್ಲಿ ಎರಡು ಹುಲಿಗಳ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

Advertisement

ಗುಂಡ್ಲುಪೇಟೆ ತಾಲೂಕಿನ, ಮೇಲೂರು-ತೆರಕಣಾಂಬಿ ಗ್ರಾಮಗಳ ಗಡಿಭಾಗದಲ್ಲಿರುವ ಮೇಲೂರು ಗ್ರಾಮದ ಸ.ನಂ 107ರ ಪಾಳು ಬಿದ್ದಿರುವ ಜಮೀನಿನ ಎರಡು ಕಡೆ ಒಂದು ವಯಸ್ಕ ಹಾಗೂ ಮರಿ ಹುಲಿಗಳ ಕಳೇಬರ ಪತ್ತೆಯಾಗಿದ್ದು ಕಳೆದ 20 ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗುರುವಾರ ಜಾನುವಾರುಗಳನ್ನು ಮೇಯಿಸುವ ವೇಳೆಯಲ್ಲಿ ಪೊದೆಯ ಕಡೆಯಿಂದ ವಾಸನೆ ಬರುತ್ತಿದ್ದು ಹೋಗಿ ನೋಡಿದಾಗ ಹುಲಿಗಳು ಕೊಳೆತ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಸ್ಥಳಕ್ಕೆ ಚಾಮರಾಜನಗರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು ಸ್ಥಳದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.

ಇದನ್ನೂ ಓದಿ:ಈಕೆಗೆ ದಿನಾ ತಿನ್ನಲು ಜಾನ್ಸನ್ ಬೇಬಿ ಪೌಡರೇ ಬೇಕಂತೆ… ಇದು ಬಿಟ್ಟು ಬೇರೆ ಏನು ಬೇಡ್ವಂತೆ

ಶುಕ್ರವಾರ ಮಧ್ಯಾಹ್ನ ಶ್ವಾನದಳದೊಂದಿಗೆ ಪೊಲೀಸರು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಎರಡು ಹುಲಿಗಳ ಕಳೇಬರ ಇನ್ನೂರು ಮೀಟರ್ ದೂರದಲ್ಲಿ ಪ್ರತ್ಯೇಕವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳು ಮೂಡಲು ಕಾರಣವಾಗಿದೆ.

Advertisement

ಹುಲಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ವಿಷಪ್ರಾಶನವಾಗಿರುವ ಜಾನುವಾರುಗಳನ್ನು ತಿಂದು ಹುಲಿಗಳು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ.

ಹೆಚ್ಚು ಕಾಣಿಸಿಕೊಳ್ಳುವ ಹುಲಿಗಳು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹತ್ತಿರವಾಗಿರುವುದರಿಂದ ಈ ಭಾಗದಲ್ಲಿ ಆಗಾಗ್ಗೆ ಹುಲಿಗಳು, ಚಿರತೆಗಳು ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸುತ್ತಿವೆ. ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಕುದುರೆ, ಹಸುಗಳನ್ನು ಕೊಂದು ತಿಂದಿತ್ತು. ಅಲ್ಲದೆ ಒಟ್ಟೊಟ್ಟಿಗೆ ಹುಲಿಗಳು ಕಾಣಿಸಿಕೊಂಡು ಭಯ ಮೂಡಿಸುತ್ತವೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next