ಚಾಮರಾಜನಗರ: ಡಾ. ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಡಿಆರ್ಎಫ್ಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಹನೂರು ತಾಲೂಕಿನ ಪಾಲಾರ್ ವನ್ಯಜೀವಿ ವಲಯದ ಡಿಆರ್‌ಎಫ್‌ಒ ಭೋಜಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಡಾ.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು 18 ಮಂದಿ ಫಲಾನುಭವಿಗಳಿಂದ ತಲಾ 1 ಸಾವಿರದಂತೆ 18,000 ಹಣಕ್ಕೆ ಭೋಜಪ್ಪ ಬೇಡಿಕೆ ಇರಿಸಿದ್ದರು.
ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಫಲಾನುಭವಿಗಳು ದೂರು ನೀಡಿದ್ದರು.
ಫಲಾನುಭವಿಗಳಿಂದ ಹಣ ಪಡೆಯುವಾಗ ಭೋಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದೆ.