ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್- CIMS )ಯ 2020-21ನೇ ಸಾಲಿನ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ರಾಜ್ಯ ಹೈಕೋರ್ಟ್ ಭಾರತೀಯ ಮೆಡಿಕಲ್ ಕೌನ್ಸಿಲ್‌ಗೆ ಆದೇಶ ನೀಡಿದೆ.
ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್‌ನ (ಎನ್‌ಎಂಸಿ) ನ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ 2020-21ನೇ ಸಾಲಿನ ಸಿಮ್ಸ್ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅನುಮತಿ ದೊರೆತಿರಲಿಲ್ಲ. ಹಾಗಾಗಿ ಒಟ್ಟು 52 ಕಾಲೇಜುಗಳ ಪಟ್ಟಿಯಲ್ಲಿ ಸಿಮ್ಸ್ ಹೆಸರು ಇರಲಿಲ್ಲ. ಇದು ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿತ್ತು.
ಎನ್‌ಎಂಸಿಗೆ ಸಮರ್ಪಕ ದಾಖಲಾತಿ ಸಲ್ಲಿಸಿರಲಿಲ್ಲ ಎಂಬ ಕಾರಣಕ್ಕೆ ಈ ಬಾರಿ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. ಕೆಲವು ತಾಂತ್ರಿಕ ಕಾರಣದಿಂದ ಈ ಗೊಂದಲ ಉಂಟಾಗಿತ್ತು. ಸಿಮ್ಸ್ ನಿಂದ ಹೈಕೋರ್ಟ್ ಮೊರೆ ಹೋಗಿ ಸೂಕ್ತ ದಾಖಲಾತಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಬಾರಿ ಕೋರ್ಸ್ ಪ್ರವೇಶಕ್ಕೆ ಅನುಮತಿ ನೀಡುವಂತೆ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ ಎಂದು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಸಂಜೀವ್ ಉದಯವಾಣಿಗೆ ತಿಳಿಸಿದರು.
ಇದನ್ನೂ ಓದಿ: ಯೂಟ್ಯೂಬರ್ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಕ್ಷಯ್ ಕುಮಾರ್
ಎನ್‌ಎಂಸಿ ಪ್ರಕಟಿಸಿದ ಪಟ್ಟಿಯಲ್ಲಿ ಚಾಮರಾಜನಗರ ಸರ್ಕಾರಿ ವೈದ್ಯಕೀಯ ಕಾಲೇಜಿನ ಹೆಸರಿಲ್ಲ ಎಂಬ ಕಾರಣಕ್ಕೆ ಪೋಷಕರು ವಿದ್ಯಾರ್ಥಿಗಳು ಆತಂಕಗೊಳ್ಳಬೇಕಾಗಿಲ್ಲ. ಎರಡನೇ ಸುತ್ತಿನ ಪಟ್ಟಿಯಲ್ಲಿ ಚಾಮರಾಜನಗರ ವೈದ್ಯಕೀಯ ಕಾಲೇಜಿನ ಹೆಸರು ಸೇರ್ಪಡೆಗೊಳ್ಳಲಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಕಾಣೆಯಾದ 76 ಮಕ್ಕಳನ್ನು ಪತ್ತೆಹಚ್ಚಿ ವಿಶೇಷ ಭಡ್ತಿ ಪಡೆದ ಮೊದಲ ಪೊಲೀಸ್ ಹೆಡ್ ಕಾನ್ಸ್ ಟೇಬಲ್