Advertisement
ತಾಲೂಕಿನ ವಡ್ಗಲ್‌ಪುರ ಗ್ರಾಮದ ನಾಗೇಂದ್ರ (22) ಶಿಕ್ಷೆಗೊಳಗಾದ ಅಪರಾಧಿ. 2021ರ ಜುಲೈ 20 ರಂದು ಚಾ.ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ತನಿಖಾಧಿಕಾರಿ ಬಿ. ಪುಟ್ಟಸ್ವಾಮಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎನ್ ಆರ್. ಲೋಕಪ್ಪ ಅವರು ನಾಗೇಂದ್ರನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ 3 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದಿಂದ ನೀಡಬೇಕೆಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದಿಸಿದ್ದರು. Advertisement
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
10:06 PM Apr 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.