Advertisement

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

10:42 AM Apr 29, 2024 | Team Udayavani |

ಮೈಸೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಂಸದ ವಿ. ಶ್ರೀನಿವಾಸ ಪ್ರಸಾದ್‌ (77) ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

Advertisement

ಮಾ.17ರಂದು ಚುನಾವಣಾ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿಕೊಂಡಿದ್ದ ಇವರು, ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಏ.22ರಂದು ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫ‌ಲಿಸದೇ ಇಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಪುತ್ರಿಯರು, ಅಳಿಯಂದಿರು ಮತ್ತು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

06-08-1947ರಲ್ಲಿ ಮೈಸೂರಿನ ಅಶೋಕಪುರಂನಲ್ಲಿ ಜನಿಸಿದ ಪ್ರಸಾದ್‌ ಅವರು, ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿದ್ದು, ಆರು ಬಾರಿ ಲೋಕಸಭೆ ಸದಸ್ಯರಾಗಿನ ಆಯ್ಕೆಯಾಗಿದ್ದರು. 2 ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2013ರಲ್ಲಿ ರಾಜ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದರು.

ಪ್ರಸಾದ್‌ ಅವರು 1977ರಿಂದ 2024ರವರೆಗೆ ವಿವಿಧ ಪಕ್ಷಗಳಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹಲವು ಸಮಿತಿಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಸಿದ್ದಾರ್ಥ ಎಜ್ಯಕೇಷನ್‌ ಸೊಸೈಟಿ, ಬಿ.ಆರ್‌. ಅಂಬೇಡ್ಕರ್‌ ಎಜ್ಯುಕೇಶನಲ್‌ ಅಂಡ್‌ ಕಲ್ಚರಲ್‌ ಸೊಸೈಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next