Advertisement

ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಶಿಕ್ಷೆ

07:25 PM Dec 30, 2022 | Team Udayavani |

ಚಾಮರಾಜನಗರ: ಎಂಟು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

Advertisement

ಜಿಲ್ಲೆಯ ಯಳಂದೂರು ಪಟ್ಟಣದ ಮಹೇಶ (28) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2019ರ ಸೆಪ್ಟೆಂಬರ್ 30 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಯಳಂದೂರು ಪಟ್ಟಣ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಎ.ಕೆ. ರಾಜೇಶ್ ಅವರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೋಕ್ಸೋ ಕಾಯ್ದೆಯಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪಿ ಮಹೇಶನು ಕೃತ್ಯ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಧೀಶರಾದ ನಿಶಾರಾಣಿಯವರು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ 30 ದಿನಗಳ ಒಳಗೆ ನೀಡಬೇಕೆಂದು ತೀರ್ಪು ನೀಡಿದ್ದಾರೆ.ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next