Advertisement
ಸೋಮವಾರ, ನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಗಳ ಪಾತ್ರ ಬಹಳ ಮಹತ್ತರವಾದುದು. ಪತ್ರಕರ್ತರು ಅಧಿಕಾರಿಶಾಹಿಯ ತಪ್ಪುಗಳನ್ನು ತಿದ್ದುವ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತವು ಅಗತ್ಯ ಸಹಕಾರವನ್ನು ಮಾಧ್ಯಮಗಳಿಗೆ ನೀಡಲಿದೆ ಎಂದು ಭರವಸೆ ನೀಡಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಮಾತನಾಡಿ, ಸಂವಿಧಾನದ 4ನೇ ಅಂಗವಾದ ಪತ್ರಿಕಾರಂಗ ಸದಾ ಎಚ್ಚರಿಕೆಯಿಂದ ಕೆಲಸ ಮಾಡಬೇಕು, ಪತ್ರಕರ್ತರು ಇಲ್ಲದೆ ಹೋದರೆ ಪ್ರಜಾಪ್ರಭುತ್ವಕ್ಕೆ ಮನ್ನಣೆ ದೊರೆಯುತ್ತಿರಲಿಲ್ಲ. ಮುಂದೆಯೂ ಮಾಧ್ಯಮಗಳು ಸಾಮಾಜಿಕ, ರಾಜಕೀಯ ವ್ಯವಸ್ಥೆಯನ್ನು ಸದಾ ಎಚ್ಚರಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ, ಸ್ವಾತಂತ್ರ್ಯ ಚಳವಳಿಯನ್ನು ಮುನ್ನಡೆಸಲು ಪತ್ರಿಕೆಗಳು ಸಹಕಾರಿಯಾಗಿದ್ದವು. ಇಂದಿನ ಕಾಲಘಟ್ಟದಲ್ಲಿ ಬಹುಬೇಗ ಸುದ್ದಿಯನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಸಾರ್ವಜನಿಕವಾಗಿ ಉತ್ತಮ ಆಡಳಿತ ನಿರ್ವಹಣೆಗೆ ಮಾಧ್ಯಮ ಸಹಕಾರಿಯಾಗಿದೆ. ಕೋವಿಡ್ ಸಂದರ್ಭದಲ್ಲೂ ಮಾಧ್ಯಮ ಕಾರ್ಯನಿರ್ವಹಿಸಿದೆ ಎಂದು ಪ್ರಶಂಸಿಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಮಾತನಾಡಿ, ಡಿ.ವಿ.ಗುಂಡಪ್ಪನವರು ಕಟ್ಟಿದ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 90 ವಷರ್ಗಳ ಇತಿಹಾಸವಿದೆ. 107 ಜನ ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಮೃತಪಟ್ಟರು. ಅವರ ಕುಟುಂಬಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘ ಸರ್ಕಾರದಿಂದ ನೆರವು ದೊರಕಿಸಿದೆ. ಪತ್ರಕರ್ತರಿಗೆ ಮಾಸಾಶನ, ಆಯುಷ್ಮಾನ್ ಕಾರ್ಡ್ ವಿತರಣೆ ಹಾಗೂ ಬಸ್ ಪಾಸ್ ಸಮಸ್ಯೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದರು.
ಜಿಲ್ಲಾ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಎಚ್.ಎಸ್. ಚಂದ್ರಶೇಖರ್, ಎಂ. ಲಿಂಗಪ್ಪ, ಗೂಳೀಪುರ ನಂದೀಶ, ಕೆ. ಗೋವಿಂದ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ, ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್, ರಾಷ್ಟ್ರೀಯ ಮಂಡಳಿ ಸದಸ್ಯ ಲಕ್ಕೂರು ಪ್ರಸಾದ್, ಪ್ರಶಸ್ತಿಗಳ ಸ್ಥಾಪಕರಾದ ಆರ್. ಪುಟ್ಟಮಲ್ಲಪ್ಪ, ಎಚ್.ಎಸ್. ಗಂಗಾಧರ್, ಹೊಸೂರು ಜಗದೀಶ್ ಉಪಸ್ಥಿತರಿದ್ದರು.