Advertisement

ಚಾಮರಾಜನಗರ:ಫ‌ಲಪುಷ್ಪ ಪ್ರದರ್ಶನಕ್ಕೆ ಸೋಮಣ್ಣ ಚಾಲನೆ

06:26 PM Sep 29, 2022 | Team Udayavani |

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ಫ‌ಲಪುಷ್ಪ ಪ್ರದರ್ಶನ ಹಾಗೂ ವಿವಿಧ ಇಲಾಖೆಗಳ ಮಳಿಗೆಗೆಳ ಪ್ರದರ್ಶನಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಫ‌ಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಬೆಳವಣಿಗೆ ದೃಷ್ಟಿಯಿಂದ ಫ‌ಲಪುಷ್ಪ ಪ್ರದರ್ಶನ ಆಯೋಜನೆ ಅಗತ್ಯವಿದೆ. ಇನ್ನೂ ವಿಸ್ತಾರವಾದ ಜಾಗದಲ್ಲಿ ಪ್ರದರ್ಶನ ಏರ್ಪಡಿಸಿ ಜನಾಕರ್ಷಣೆ ಮಾಡಬೇಕು ಎಂದರು.

ಹಂತಹಂತವಾಗಿ ಬೆಳವಣಿಗೆ: ಫ‌ಲಪುಷ್ಪ ಪ್ರದರ್ಶನಕ್ಕೆ ಇತಿಹಾಸವಿದೆ. ಫ‌ಲಪುಷ್ಪ ಪ್ರದರ್ಶನವನ್ನು ಹೆಚ್ಚಿನ ಜನರು ವೀಕ್ಷಿಸುವಂತಿರಬೇಕು. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮವಾಗಿ ಫ‌ಲಪುಷ್ಪ ಪ್ರದರ್ಶನ ಕಾರ್ಯ ಕ್ರಮ ಏರ್ಪಡಿಸಿ ಚಾಮರಾಜನಗರ ಜಿಲ್ಲೆಯ ತೋಟಗಾರಿಕಾ ಕ್ಷೇತ್ರದಲ್ಲಿ ಹೆಸರು ಗಳಿಸಬೇಕು. ಜಿಲ್ಲೆ ಅಭಿವೃದ್ಧಿಯತ್ತ ಸಾಗಲು ಹಂತಹಂತವಾಗಿ ಬೆಳವಣಿಗೆ ಯಾಗಬೇಕಿದೆ ಎಂದು ಸಚಿವರು ತಿಳಿಸಿದರು.

ಈ ಬಾರಿ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಇದರಿಂದ ಎದೆಗುಂದ ಬೇಕಾಗಿಲ್ಲ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಆಗಿರುವ ನಷ್ಟವನ್ನು ಭರಿಸಲು ಸರ್ಕಾರ ನೇರವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತಿದೆ ಎಂದು ತಿಳಿಸಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಚಾಮರಾಜನಗರ ಜಿಲ್ಲೆಯಾಗಿ 25 ವರ್ಷಗಳನ್ನು ಪೂರೈಸಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಚಾಮ ರಾಜನಗರ ಹೊಂದಿದೆ.

ಹಾಗೆಯೇ ಜಿಲ್ಲೆಯಲ್ಲಿ ವಿವಿಧ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ ಎಂದರು. ಎಲ್ಲೆಡೆ ಅಂತರ್ಜಲ ವೃದ್ಧಿ: ಜಿಲ್ಲೆಯಲ್ಲಿ ಈ ಬಾರಿ ಮಳೆ, ಕೆರೆಗಳು ತುಂಬಿದ ಪರಿಣಾಮ ಎಲ್ಲೆಡೆ ಅಂತ ರ್ಜಲ ವೃದ್ಧಿಯಾಗಿದೆ. ಚಾಮರಾಜನಗರ ಸಮೃದ್ಧಿ ಯತ್ತ ಸಾಗಲಿದೆ. ಸರ್ಕಾರ ಹನಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರ ಹಿತಕ್ಕಾಗಿ ಹಿರಿಕೆರೆಯನ್ನು ತುಂಬಿಸಬೇಕು. ಹಿರಿಕೆರೆ ತುಂಬಿದರೆ ಸುತ್ತಮುತ್ತಲಿನ ಎಲ್ಲಾ ಕೆರೆಗಳು ತುಂಬಲಿವೆ. ಇದರಿಂದ ರೈತರಿಗೆ
ಅನುಕೂಲವಾಗಲಿದೆ ಎಂದು ತಿಳಿಸಿದರು.

Advertisement

ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಕುಮಾರ್‌, ಮಾಜಿ ಸದಸ್ಯರಾದ ಬಾಲರಾಜು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್‌, ಇತರರು ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮಕ್ಕೂ ಮೊದಲು ಪುಷ್ಪಗಳಿಂದ ಅಲಂಕೃತಗೊಳಿ ಸಲಾಗಿರುವ ವಿವಿಧ ಕಲಾಕೃತಿಗಳನ್ನು ಉಸ್ತುವಾರಿ ಸಚಿವರು ವೀಕ್ಷಿಸಿದರು. ವಿವಿಧ ಇಲಾಖೆ ಗಳ ನೆರವಿನಡಿ ಮಹಿಳಾ ಸ್ವ ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಪ್ರದರ್ಶನ, ಕೈಮಗ್ಗ, ಜವಳಿಯಿಂದ ಉತ್ಪಾದಿಸಿದ ವಸ್ತು ಗಳನ್ನು ವೀಕ್ಷಣೆ ಮಾಡಿದರು. ಕೃಷಿ, ಮೀನುಗಾರಿಕೆ, ಸೇರಿದಂತೆ ವಿವಿಧ ಇಲಾಖೆಗಳು ತೆರೆದಿರುವ ಮಾಹಿತಿ ಮಳಿಗೆಗಳನ್ನು ಸಚಿವರು ವೀಕ್ಷಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next