ಮೈಸೂರು:ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣದ ಸಾವಿನ ಸಂಖ್ಯೆ ಸೋಮವಾರವೂ ಮುಂದುವರಿದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಮೊನ್ನೆ ತಂದೆ ಸಾವು, ಇಂದು ತಾಯಿ ಸಾವು…ಮಕ್ಕಳು ಅನಾಥ!
ಶನಿವಾರ ವಿಷಪ್ರಸಾದ ಸೇವಿಸಿದ ಪ್ರಕರಣದಲ್ಲಿ ಮಾರ್ಟಳ್ಳಿಯ ಕೃಷ್ಣನಾಯ್ಕ್ ಅವರು ಸಾವನ್ನಪ್ಪಿದ್ದರು. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ ಮೈಲಿಬಾಯಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮೂವರು ಮಕ್ಕಳು ಅನಾಥರಾಗಿದ್ದಾರೆ.
ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇನ್ನೂ 8 ಮಂದಿ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.