Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಅವರು, ಚಾಮರಾಜನಗರ ತಾಲೂಕಿನಲ್ಲಿ 742 ಸ್ಥಾನಗಳಿಗೆ ಈಗಾಗಲೇ49 ಮಂದಿ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ 693 ಸ್ಥಾನಗಳಿಗೆ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ 499 ಸ್ಥಾನಗಳಿದ್ದು ಈಗಾಗಲೇ 13 ಮಂದಿ ಅವಿರೋಧವಾಗಿ ಆಯ್ಕೆಯಾಗಿರುವ ಕಾರಣ 486 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟಾರೆ 1,179 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಅಂತಿಮವಾಗಿ ಚಾಮರಾಜನಗರ ತಾಲೂಕಿನಲ್ಲಿ1876, ಗುಂಡ್ಲುಪೇಟೆ ತಾಲೂಕಿ ನಲ್ಲಿ1203 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಮೊದಲ ಹಂತದ ಚುನಾವಣಾ ಮತದಾನವು ಡಿ. 22ರಂದು ನಡೆಯಲಿದೆ ಎಂದರು.
Related Articles
Advertisement
ಅಭ್ಯರ್ಥಿಯು ಮುದ್ರಿಸಿರುವ ಕರಪತ್ರ, ಪೋಸ್ಟರ್ ಅಥವಾ ಇನ್ನಾವುದೇ ಪ್ರಚಾರ ಸಾಮಗ್ರಿಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ,ರಾಜಕೀಯ ಮುಖಂಡರ ಭಾವಚಿತ್ರ ಬಳಸಿದ್ದಲ್ಲಿ ಅಂತಹ ಪ್ರಚಾರ ಸಾಮಗ್ರಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭೆಗಳಲ್ಲಿರಾಜಕೀಯ ವ್ಯಕ್ತಿಗಳು ಭಾಗವಹಿಸಿ, ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ನೀಡುವಂತಿಲ್ಲ ಎಂದರು.
ಮದ್ಯ ಬಂದ್: ಮತದಾನ ಮುಕ್ತಾಯಕ್ಕೆ 48 ಗಂಟೆಗಳ ಮುಂಚೆ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಲಾಗುತ್ತದೆ. ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಲ್‌ರೋಡ್ ಮತ್ತು ಪಾಲಾರ್‌ನಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು. ಜಿಲ್ಲಾ ಪಂಚಾಯ್ತಿ ಸಿಇಒ ಹರ್ಷಲ್ ಬೋಯರ್ ನಾರಾಯಣ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಪ್ರತಿ ಮತಗಟ್ಟೆಗೂರಕ್ಷಣಾ ಕಿಟ್ : ಕೋವಿಡ್-19ರ ಹಿನ್ನೆಲೆಯಲ್ಲಿ ಚುನಾವಣೆ ವೇಳೆ ಮುನ್ನೆಚ್ಚರಿಕೆಕ್ರಮಗಳನ್ನು ತೆಗದುಕೊಳ್ಳಲಾಗಿದೆ. ಪ್ರತಿ ಮತಗಟ್ಟೆಗೂ ರಕ್ಷಣಾಕಿಟ್‌ಗಳನ್ನು ಆಯೋಗವು ಒದಗಿಸುತ್ತಿದ್ದು, ಪ್ರತಿ ಕಿಟ್‌ನಲ್ಲಿ ಫೇಸ್ ಮಾಸ್ಕ್,ಕೈಗವಸು, ಫೇಸ್‌ಶೀಲ್ಡ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್‌ಗಳು ಇರುತ್ತವೆ.ಕೋವಿಡ್ ಸೋಂಕಿತರಿಗಾಗಿ ಮತದಾನದಂದು ಅಗತ್ಯಕೋವಿಡ್ ಮುನ್ನೆಚ್ಚರಿಕೆಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.
ಅಭ್ಯರ್ಥಿ ಜತೆ 5 ಮಂದಿ ಮಾತ್ರ ಪ್ರಚಾರಕ್ಕೆ : ಅಭ್ಯರ್ಥಿಗಳು ಗರಿಷ್ಠ5 ಜನ ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮನೆಮನೆಗೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದಕರಪತ್ರಗಳನ್ನು ಹಂಚಬಹುದು. ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಯನ್ನು ಬಳಸಿಜಾಹೀರಾತು ನೀಡುವಂತಿಲ್ಲ. ಅನಧಿಕೃತವಾಗಿ ಕರಪತ್ರಗಳನ್ನು ಮುದ್ರಿಸಿ ಪ್ರಚಾರ ಮಾಡುವುದುಕಂಡುಬಂದಲ್ಲಿ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರವಿ ಎಚ್ಚರಿಸಿದರು.