ಚಾಮರಾಜನಗರ: ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ದುರಂತವೊಂದು ನಡೆದಿದ್ದು, ಆಕ್ಸಿಜನ್ ಸಿಗದೆ 12 ಮಂದಿ ಸೇರಿದಂತೆ ಒಟ್ಟು 22 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 10.30 ರಿಂದಲೂ ಆಕ್ಸಿಜನ್ ಸರಬರಾಜು ಮುಗಿದಿದ್ದು, ಈ ದುರಂತಕ್ಕೆ ಕಾರಣವಾಗಿದೆ. ಆಮ್ಲಜನಕ ಕೊರತೆಯಿಂದ 12 ಮಂದಿ ರೋಗಿಗಳು ಮೃತಪಟ್ಟಿದ್ದಾರೆ.ಇತರ ಕಾರಣಗಳಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
24 ವೆಂಟಿಲೇಟರ್ ಗಳು ಸೇರಿದಂತೆ 100 ಆಕ್ಸಿಜನ್ ಬೆಡ್ ಗಳು ಇವೆ. ಈಗ ಆಮ್ಲಜನಕ ಕೊರತೆಯಾಗಿರುವುದರಿಂದ ರೋಗಿಗಳಿಗೆ ಆಮ್ಲಜನಕ ಪೂರೈಕೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ 10 : 30 ರ ವರೆಗೆ ಸಾಕಾಗುವಷ್ಟು ಆಕ್ಸಿಜನ್ ದಾಸ್ತಾನು ಇತ್ತು.
ಇದನ್ನೂ ಓದಿ:ಕೋವಿಡ್ ಮಧ್ಯೆಯೇ ಮದುವೆ : ನಿಯಮ ಪಾಲಿಸಲು ಈ ನವ ಜೋಡಿ ಮಾಡಿದ್ರು ನ್ಯೂ ಐಡಿಯಾ..!
ಮೈಸೂರಿನಿಂದ 2 ದಿನಗಳ ಹಿಂದಿನವರೆಗೂ ಆಮ್ಲಜನಕ ಪೂರೈಕೆ ಆಗುತ್ತಿತ್ತು. ಆದರೆ , ಮೈಸೂರು ಜಿಲ್ಲೆ ಹೊರತು ಪಡಿಸಿ ನೆರೆಯ ಜಿಲ್ಲೆಗೆ ಆಮ್ಲಜನಕ ಪೂರೈಕೆ ಮಾಡಬಾರದು ಎಂದು ಗ್ಯಾಸ್ ಏಜೆನ್ಸಿಗೆ ಆದೇಶಿಸಿರುವ ಕಾರಣ, ಜಿಲ್ಲೆಗೆ ಆಮ್ಲಜನಕ ಸಿಲಿಂಡರ್ ಗಳನ್ನುನೀಡಿಲ್ಲ. ಹೀಗಾಗಿ ರವಿವಾರ ಚಾಮರಾಜ ನಗರ ಜಿಲ್ಲಾಸ್ಪತ್ರೆಗೆ ಅಗತ್ಯ ಪ್ರಮಾಣದ ಸಿಲಿಂಡರ್ ಗಳು ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಆಸ್ಪತ್ರೆ ಆವರಣದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.