Advertisement

Chamarajanagar: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ… ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ

07:40 PM Jun 28, 2023 | Team Udayavani |

ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಆದೇಶ ನೀಡಿದೆ.

Advertisement

ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ (37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1 ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಪೋಷಕರ ಮೇಲೆ ಕೊಲೆ ಬೆದರಿಕೆ ಹಾಕಿದ್ದು ವಿಚಾರಣೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಬುಧವಾರ ಶಿಕ್ಷೆ ಪ್ರಕಟಿಸಿದರು.

ಪಿಎಸ್‌ಐ ಮಾದೇಗೌಡ ಮತ್ತು ತಾಜುದ್ದೀನ್ ಪ್ರಕರಣದ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣಾನೆ ಮರಿ ಸಾವು

Advertisement

Udayavani is now on Telegram. Click here to join our channel and stay updated with the latest news.

Next