Advertisement

27ಕ್ಕೆ ಚಾ.ನಗರ ದಸರಾಕ್ಕೆ ಅದ್ಧೂರಿ ಚಾಲನೆ

01:31 PM Sep 25, 2022 | Team Udayavani |

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಕಾರ್ಯ ಕ್ರಮವು ಸೆ. 27ರಿಂದ 30ರವರೆಗೆ ನಡೆಯಲಿದ್ದು, 27ರಂದು ಉದ್ಘಾಟನೆ ನಡೆಯಲಿದೆ.

Advertisement

ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಸಂಸದ ವಿ.ಶ್ರೀನಿವಾಸಪ್ರಸಾದ್‌, ಶಾಸಕರಾದ ಆರ್‌. ನರೇಂದ್ರ, ಎನ್‌. ಮಹೇಶ್‌, ಸಿ.ಎಸ್‌. ನಿರಂಜನ ಕುಮಾರ್‌, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್‌. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ನಗರಸಭೆಯ 21ನೇ ವಾರ್ಡ್‌ ಸದಸ್ಯ ಸುದರ್ಶನಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ: ಸೆ. 27ರಂದು ಬೆಳಗ್ಗೆ 10.15 ಕ್ಕೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 11 ಕ್ಕೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್‌. ಪಟೇಲ್‌ ಸಭಾಂಗಣ ಹಾಗೂ ವರನಟ ಡಾ. ರಾಜ್‌ ಕುಮಾರ್‌ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.

ಬೆಳಗ್ಗೆ 11 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಚಿತ್ರಕಲಾ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 2.30 ಕ್ಕೆ ನಗರದ ಜಿಲ್ಲಾಡಳಿತ ಭವನದಿಂದ ವಿವಿಧ ಕಲಾತಂಡಗಳು ಮತ್ತು ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಮೆರವಣಿಗೆ ಆರಂಭವಾಗಲಿದೆ. ಸಂಜೆ 5.30 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ.

Advertisement

28ಕ್ಕೆ ಮಹಿಳಾ ದಸರಾ ಕಾರ್ಯಕ್ರಮ: ಸೆ. 28ರಂದು ಬೆಳಗ್ಗೆ 6.30 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಮ್ಯಾರಥಾನ್‌, ಬೆಳಗ್ಗೆ 7.30 ಕ್ಕೆ ಮಹಿಳಾ ದಸರಾ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಫ‌ಲಪುಷ್ಪ ಪ್ರದರ್ಶನ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 11 ರಿಂದ ಸಂಜೆ 6 ಗಂಟೆಯವರೆ ನಗರದ ಜೆ.ಎಚ್‌. ಪಟೇಲ್‌ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜರುಗಲಿವೆ.

ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮ ರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆ ಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

29ಕ್ಕೆ ರೈತ ದಸರಾ ಕಾರ್ಯಕ್ರಮ : ಸೆ.29ರಂದು ಬೆಳಗ್ಗೆ 9 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ರೈತ ದಸರಾ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. 10 ಕ್ಕೆ ಚಾಮರಾಜೇಶ್ವರ ದೇವಸ್ಥಾನದಿಂದ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದವರೆಗೆ ರೈತರ ದಸರಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. 11 ಕ್ಕೆ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ರೈತ ದಸರಾ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11 ರಿಂದ ಸಂಜೆ 6 ಕ್ಕೆ ಜೆ.ಎಚ್‌. ಪಟೇಲ್‌ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯಲಿವೆ. ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.  ಸೆ. 30ರಂದು ಬೆಳಗ್ಗೆ 11 ರಿಂದ ಸಂಜೆ 6ಕ್ಕೆ ಜೆ.ಎಚ್‌. ಪಟೇಲ್‌ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯಲಿವೆ. ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ 2022ನೇ ಸಾಲಿನ ದಸರಾ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next