Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಹಿಂದಿನಿಂದಲೂ ಬಹಳ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಂತಹ ಜಿಲ್ಲೆಯಾಗಿದೆ. ಪ್ರಸ್ತುತ ದಲ್ಲಿಯೂ ಹೀಗೆಯೇ ಕಾರ್ಯನಿರ್ವಹಿಸುವ ದೃಷ್ಟಿಯಿಂದ ಯುಗಾದಿ ಹಬ್ಬದವರೆಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.ಕೋವಿಡ್ ಹರಡದಂತೆ ವಹಿಸಬೇಕಿರುವ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.
Related Articles
Advertisement
ಲಸಿಕೆ: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ವಿರುದ್ಧದ ರೋಗ ನಿರೋಧಕ ಲಸಿಕೆಯನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಾದ ಜೆಎಸ್‌ಎಸ್ ಹಾಗೂ ಹನೂರು ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ 250 ರೂ ನೀಡಿ ಲಸಿಕೆ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷ ಒಳಪಟ್ಟವರು ಉಚಿತವಾಗಿ ಲಸಿಕೆ ಪಡೆಯಬೇಕು. ಆಧಾರ್ ಇತರೆ ಗುರುತಿನ ಚೀಟಿ ಹಾಜರುಪಡಿಸಿ ಲಸಿಕೆ ಪಡೆಯಬಹುದು. ಆನ್ ಲೈನ್ ಮೂಲಕವು ನೋಂದಣಿ ಮಾಡಿಸಿ ಲಸಿಕೆ ಪಡೆಯಲು ಅವಕಾಶವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಕೋವಿಡ್ ನೋಡೆಲ್ ಅಧಿಕಾರಿ ಡಾ. ಮಹೇಶ್, ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕೋವಿಡ್ ಲಸಿಕೆ ವಿಶೇಷ ಅಭಿಯಾನ :
ಜಿಲ್ಲೆಯಲ್ಲಿ 1 ಲಕ್ಷ ಜನರು 60 ವರ್ಷ ಮೇಲ್ಪಟ್ಟವರು ಇದ್ದಾರೆ. ಲಸಿಕೆ ಕಾರ್ಯದ ಪ್ರಗತಿಗಾಗಿ ಈ ವಾರದಲ್ಲಿ ಶುಕ್ರವಾರ, ಶನಿವಾರ, ಭಾನುವಾರ ಹಾಗೂ ಸೋಮವಾರದಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಮತ್ತು ಗುರುವಾರ ಮಕ್ಕಳಿಗೆ ಸಾಮಾನ್ಯವಾಗಿ ನೀಡುವ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಪೂರ್ವಯೋಜಿತವಾಗಿರುವುದರಿಂದ ಅಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ದಿನಗಳಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ. ತಾಲೂಕು ಜಿಲ್ಲಾ ಆಸ್ಪತ್ರೆಗಳಲ್ಲಿ ಭಾನುವಾರ ಹಾಗೂ ರಜಾ ದಿನಗಳನ್ನು ಹೊರತುಪಡಿಸಿ ಎಲ್ಲಾ ದಿನಗಳಲ್ಲೂ ಲಸಿಕೆ ಪಡೆಯಬಹುದೆಂದು ಜಿಲ್ಲಾಧಿಕಾರಿ ತಿಳಿಸಿದರು.
ನಿಗದಿ ಅವಧಿಯೊಳಗೆ ಕೋವಿಡ್ ಟೆಸ್ಟ್ :
ಹೋಟೆಲ್, ರೆಸಾರ್ಟ್, ವಸತಿ ಗೃಹಗಳಲ್ಲಿ ಹೊರಭಾಗದಿಂದ ಬಂದು ವಾಸ್ತವ್ಯ ಹೂಡುವವರ ಮೇಲೆ ಆರೋಗ್ಯ ಕುರಿತಗಮನಹರಿಸುವಂತೆ ಮಾಲೀಕರಿಗೆಸೂಚಿಸಲಾಗಿದೆ. ಅಲ್ಲದೇ ಹೋಟೆಲ್, ರೆಸಾರ್ಟ್ ನಂತಹ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ನಿಗದಿತ ಅವಧಿಯೊಳಗೆ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.