ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತೀವ್ರಗತಿಯಲ್ಲಿ ಏರಿಕೆ ಆಗುತ್ತಿರುವುದ ರಿಂದ ಲಾಕ್‌ಡೌನ್ ಅನ್ನು ಇನ್ನಷ್ಟು ಯಶಸ್ವಿ ಗೊಳಿಸಲು ಜಿಲ್ಲೆಯಲ್ಲಿ ಸೋಮವಾರ, ಮಂಗಳವಾರ ಹಾಗೂ ಬುಧವಾರ ಬೆಳಗೆ Y 6ರಿಂದ10 ರವರೆಗೆ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿ ಗುರುವಾರ, ಶುಕ್ರವಾರ ಶನಿವಾರ ಹಾಗೂ ಭಾನುವಾರದ 4 ದಿನ ಸಂಪೂರ್ಣ ಬಂದ್ ಮಾದರಿಯಲ್ಲಿ ಅಂಗಡಿ ಮುಂಗಟ್ಟು ಮುಚ್ಚಲು ಟಾಸ್ಕ್ಫೋರ್ಸ್ ಸಭೆಯಲ್ಲಿ ನಿರ್ಣಯಿಸಲಾಗಿದೆಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಕೋವಿಡ್ ಆರೈಕೆ ಕೇಂದ್ರ ಬಳಸಿಕೊಳ್ಳಿ:
ಗ್ರಾಮಾಂತರ ಪ್ರದೇಶಗಳಲ್ಲಿಯೂ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿದ್ದು, ಲಕ್ಷಣ ರಹಿತ ಸೋಂಕಿತರಿ ಗಾಗಿಯೇ ಜಿಲ್ಲಾದ್ಯಂತ ಸ್ಥಾಪಿತವಾಗಿರುವ ಕೋವಿಡ್ ಆರೈಕೆ ಕೇಂದ್ರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು.
ಪರಿಣಿತರ ತಂಡದ ವರದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಪರಿಣಿತರ ತಂಡ, ತನ್ನ ವರದಿಯನ್ನು ಈಗಾಗಲೇ ಆರೋಗ್ಯ ಇಲಾಖೆಗೆ ಸಲ್ಲಿಸಿದೆ. ರಾಜೀವ ಗಾಂಧಿ ಆರೋಗ್ಯ ವಿವಿ ಪ್ರತಿನಿಧಿಗಳು ಈ ವರದಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವೈದ್ಯಕೀಯ ವ್ಯವಸ್ಥೆ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ಮನವರಿಕೆ ಮಾಡಿಕೊಡಲಿದೆ. ಕೆಲ ದಿನಗಳಲ್ಲಿ ಈ ಕುರಿತಂತೆ ವಿಡಿಯೋ ಸಂವಾದದ ಮೂಲಕ ಸಲಹೆಯನ್ನು ಪಡೆದು ಅನುಪಾಲಿಸಲಿದೆ ಎಂದರು.
ಲಾಕ್‌ಡೌನ್‌ಗೆ ಸಹಕರಿಸಿ: ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಆರ್ಥಿಕತೆಗೆ ತೀವ್ರ ತೊಂದರೆಯಾದರೂ ಅನಿವಾರ್ಯವಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ನಾಗರಿ ಕರು ಜವಾಬ್ದಾರಿ ಅರಿತು ಸರ್ಕಾರದನಿರ್ಧಾರಕ್ಕೆ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದರು.
ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್. ನಿರಂಜನ ಕುಮಾರ್, ಜಿಲ್ಲಾಧಿಕಾರಿ ಡಾ.ಎಂ. ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಹಿರಿಯ ಅಧಿಕಾರಿ ಗಳು ಇದ್ದರು.